LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಇಳಿಕೆಯ ಹಾದಿಯಲ್ಲಿ ಚಿನ್ನ: ಮಾರುಕಟ್ಟೆಯಲ್ಲಿ ಸಂಚಲನ

ಬೆಂಗಳೂರು, ಜೂ. 11 : ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ನಿರಂತರವಾಗಿ ಇಳಿಕೆಯಾಗುತ್ತಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದವರಿಗೆ ಇದು ಸುವರ್ಣಾವಕಾಶವಾಗಿ ಪರಿಣಮಿಸಿದೆ. ಜಾಗತಿಕ ಆರ್ಥಿಕ ಬೆಳವಣಿಗೆಗಳು, ಬಲಿಷ್ಠ ಅಮೆರಿಕನ್ ಡಾಲರ್, ಏರಿಕೆಯಾಗುತ್ತಿರುವ ಕಚ್ಚಾತೈಲ ಬೆಲೆ ಹಾಗೂ ಬಡ್ಡಿದರಗಳ ಕುರಿತ ಆತಂಕಗಳು ಚಿನ್ನದ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ.

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಅಮೆರಿಕ–ಇರಾನ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ. ಇದರ ನಡುವೆಯೇ ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ನಿರಂತರ ಇಳಿಕೆ ದಾಖಲಿಸಿದ್ದು, ದೇಶೀಯ ಮಾರುಕಟ್ಟೆಯಲ್ಲಿಯೂ ಅದರ ಪ್ರಭಾವ ಕಂಡುಬಂದಿದೆ.

ಗುರುವಾರದ ವಹಿವಾಟಿನಲ್ಲಿ ಬೆಂಗಳೂರಿನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ 213 ರೂ. ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ದರ 1,45,640 ರೂ.ಗೆ ತಲುಪಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ 195 ರೂ. ಇಳಿಕೆಯಾಗಿದ್ದು, 10 ಗ್ರಾಂಗೆ 1,33,500 ರೂ. ನಿಗದಿಯಾಗಿದೆ. 18 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ 160 ರೂ. ಕುಸಿದು, 10 ಗ್ರಾಂಗೆ 1,09,230 ರೂ.ಗೆ ತಲುಪಿದೆ.

ಕರಾವಳಿ ನಗರ ಮಂಗಳೂರಿನಲ್ಲಿಯೂ ಚಿನ್ನದ ದರ ಇಳಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,564 ರೂ., 22 ಕ್ಯಾರೆಟ್ ಚಿನ್ನದ ಬೆಲೆ 13,350 ರೂ. ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆ 10,923 ರೂ.ಗೆ ದಾಖಲಾಗಿದೆ.

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಗಮನಾರ್ಹ ಕುಸಿತ ಕಂಡುಬಂದಿದೆ. ಮೇ ತಿಂಗಳಲ್ಲಿ ಪ್ರತಿ ಕೆಜಿಗೆ 2.90 ಲಕ್ಷ ರೂ.ವರೆಗೆ ಏರಿದ್ದ ಬೆಳ್ಳಿ, ಜೂನ್ ಆರಂಭದಿಂದ ಇಳಿಕೆಯ ಹಾದಿ ಹಿಡಿದಿದೆ. ಕಳೆದ ಕೆಲವು ದಿನಗಳಲ್ಲಿ ಹಂತ ಹಂತವಾಗಿ ಕುಸಿದ ಬೆಳ್ಳಿಯ ಬೆಲೆ ಇದೀಗ ಪ್ರತಿ ಕೆಜಿಗೆ 2.50 ಲಕ್ಷ ರೂ. ಮಟ್ಟದಲ್ಲಿ ಸ್ಥಿರವಾಗಿದೆ.

ದೇಶದ ಪ್ರಮುಖ ನಗರಗಳಾದ ಹೊಸದಿಲ್ಲಿ, ಮುಂಬೈ, ಅಹಮದಾಬಾದ್, ಕೋಲ್ಕತ್ತಾ, ಹೈದರಾಬಾದ್, ಜೈಪುರ, ಚಂಡೀಗಢ ಹಾಗೂ ಲಖನೌಗಳಲ್ಲಿ ಕೂಡ ಚಿನ್ನದ ಬೆಲೆ ಇಳಿಕೆ ಕಂಡಿದೆ. ಚೆನ್ನೈನಲ್ಲಿ ಅತ್ಯಧಿಕ ಕುಸಿತ ದಾಖಲಾಗಿದ್ದು, 24 ಕ್ಯಾರೆಟ್ ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ 327 ರೂ. ಮತ್ತು 22 ಕ್ಯಾರೆಟ್ ಚಿನ್ನದ ದರದಲ್ಲಿ 300 ರೂ. ಇಳಿಕೆಯಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಜಾಗತಿಕ ರಾಜಕೀಯ ಹಾಗೂ ಆರ್ಥಿಕ ಪರಿಸ್ಥಿತಿಗಳ ಬೆಳವಣಿಗೆಗಳನ್ನು ಅವಲಂಬಿಸಿ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತಷ್ಟು ಏರಿಳಿತ ಕಂಡುಬರುವ ಸಾಧ್ಯತೆ ಇದೆ. ಆದರೆ ಸದ್ಯದ ಇಳಿಕೆ ಖರೀದಿದಾರರಲ್ಲಿ ಉತ್ಸಾಹ ಮೂಡಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ