LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ; ಎಲ್ಲ ಸೇವೆಗಳಿಗೆ ತೊಂದರೆ, ಶಾಲಾ-ಕಾಲೇಜ್‌ ಬಂದ್

ಬೆಂಗಳೂರು, 28- ವೇತನ ಪರಿಷ್ಕರಣೆಗೆ ಆಗ್ರಹಿಸಿ ಮತ್ತು 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ ಮಾರ್ಚ 1ರಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದು, ಬಹುತೇಕ ಸೇವೆಗಳು ವ್ಯತ್ಯಯವಾಗಲಿದೆ. 



ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವುಂಟಾಗಲಿದೆ. ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಗ್ರಾಮ ಪಂಚಾಯತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಗಳ ವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು ಬಹುತೇಕ ಸೇವೆಗಳಿಗೆ ತೊಂದರೆಯಾಗಲಿದೆ.



ಕರ್ನಾಟಕ ಸಚಿವಾಲಯ ನೌಕರರ ಸಂಘ, ವಿವಿಧ ನಿಗಮ ಮಂಡಳಿಗಳ ನೌಕರರು, ಅರಣ್ಯ ಇಲಾಖೆ ನೌಕರರು ಭಾಗವಹಿಸುತ್ತಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳು ಸಹ ಸ್ಥಗಿತವಾಗಲಿವೆ. ಕಸ ಸಂಗ್ರಹದಲ್ಲಿ ವ್ಯತ್ಯಯ, ಶಾಲಾ-ಕಾಲೇಜುಗಳು ಬಂದ್, ಹೊರ ರೋಗಿಗಳ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಲಭ್ಯ, ಆಸ್ತಿ ನೋಂದಣಿ ಸ್ಥಗಿತ, ತಹಶೀಲ್ದಾರ್ ಕಚೇರಿ ಬಂದ್, ಅಹವಾಲು ಸಲ್ಲಿಕೆ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ.



ಈ ಬಾರಿ ಮಂಡಿಸಿದ ಮುಂಗಡಪತ್ರದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲದ ಕಾರಣ ಮತ್ತು ಹೊಸ ಪಿಂಚಣಿ ನೀತಿ ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ.



ಮುಷ್ಕರ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ, ನೌಕರರು ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಧರಣಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವಂತಿಲ್ಲ ಎಂದು ನೌಕರರ ಸಂಘ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆಗಳು ದೊರಕುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಲಿದ್ದಾರೆ. ಬಸ್ ಗಳ ಸಂಚಾರ ಎಂದಿನಂತಿರುತ್ತದೆ. ವಿವಿಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು