LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿ ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ನೀಡಿ: ಕರವೇ ಆಗ್ರಹ

ಬೆಳಗಾವಿ, ಅ. 17 (ಸಮದರ್ಶಿ ಸುದ್ದಿ): ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ₹1 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ. ನಾರಾಯಣಗೌಡ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲೇ ಅತ್ಯಂತ ವೈಭವದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸುವ ನಗರಗಳಲ್ಲಿ ಬೆಳಗಾವಿ ಪ್ರಮುಖವಾಗಿದೆ. ಇಲ್ಲಿನ ರಾಜ್ಯೋತ್ಸವ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಕನ್ನಡಾಭಿಮಾನಿಗಳು ಪಾಲ್ಗೊಳ್ಳುತ್ತಾರೆ. ಆದ್ದರಿಂದ ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ರಾಜ್ಯೋತ್ಸವಕ್ಕೂ ಪ್ರತಿವರ್ಷ ವಿಶೇಷ ಅನುದಾನ ಬಿಡುಗಡೆ ಮಾಡಲು ಸರ್ಕಾರ ಶಾಶ್ವತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಬರ ಪರಿಸ್ಥಿತಿಯಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳಸಾ–ಬಂಡೂರಿ ಹಾಗೂ ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಅನುಮತಿ ಪಡೆಯಲು ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ಯಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯೋತ್ಸವದ ವೈಭವವನ್ನು ಮತ್ತಷ್ಟು ಹೆಚ್ಚಿಸಲು ಹಾಗೂ ಗಡಿಭಾಗದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST