LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ‌ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಎಚ್.ಡಿ. ರೇವಣ್ಣ

ಬೆಂಗಳೂರು, ಮೇ 1 : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯ ಅಪಹರಣ ಆರೋಪದ ಪ್ರಕರಣದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಹಿಂಪಡೆದಿದ್ದಾರೆ.

ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಆಧಾರದಲ್ಲಿ ಮೈಸೂರು ಜಿಲ್ಲೆಯ ಕೆ.ಆರ್‌. ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿಶೇಷ ತನಿಖಾ ದಳ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಡೆಸಿತು.

 

ರೇವಣ್ಣ ಪರ ವಕೀಲ ಬಿ.ಎಂ. ಗಿರೀಶ್‌ ಕುಮಾರ್‌ ಸಲ್ಲಿಸಿದ ಮೆಮೊವನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು. ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ ಎಂದು ತಿಳಿಸಿ, ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.

 

ಇದಕ್ಕೂ ಮೊದಲು, 2025ರ ಜನವರಿ 17ರಂದು ವಿಚಾರಣಾ ನ್ಯಾಯಾಲಯದಲ್ಲಿ ಆರೋಪ ನಿಗದಿಪಡಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಬಳಿಕ ರೇವಣ್ಣ ಪರ ವಕೀಲರು ಹಲವು ಬಾರಿ ವಿಚಾರಣೆ ಮುಂದೂಡಿಕೆ ಕೋರಿದ್ದರು. ಈ ಹಿನ್ನೆಲೆ 2026ರ ಫೆಬ್ರವರಿ 5ರಂದು ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಇದೀಗ, ರೇವಣ್ಣ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣ ‌ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಎಚ್.ಡಿ. ರೇವಣ್ಣರಾಜಕೀಯ ಸಭೆಗಳಿಗೆ ಧಾರ್ಮಿಕ ಸ್ಥಳಗಳ ಬಳಕೆಗೆ ಅವಕಾಶ ಇಲ್ಲ : ಹೈಕೋರ್ಟಕರಿಷ್ಮಾ ಕಪೂರ ಮಕ್ಕಳಿಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ2026ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: 180 ದೇಶಗಳ ಪೈಕಿ 157ನೇ ಸ್ಥಾನಕ್ಕೆ ಕುಸಿದ ಭಾರತನಾಯಕತ್ವ ಬದಲಾವಣೆ ಕುರಿತು ಸೂಕ್ತ ಸಮಯದಲ್ಲಿ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆಮುಸ್ಲಿಮರ ಮೇಲಿನ ದಾಳಿ ಪ್ರಕರಣಗಳಲ್ಲಿ ಮಾನವ ಹಕ್ಕು ಆಯೋಗಗಳ ನಿರ್ಲಕ್ಷ್ಯ: ಅಲಹಾಬಾದ ಹೈಕೋರ್ಟನಲ್ಲಿ ಭಿನ್ನಾಭಿಪ್ರಾಯಪಿಕ್‌ಅಪ್‌ ವಾಹನ–ಎಸ್‌ಯುವಿ ಡಿಕ್ಕಿ: 15 ಮಂದಿ ಸಾವು ಕ್ಲೋರಿನ್ ಅನಿಲ ಸೋರಿಕೆ: 22 ನಿವಾಸಿ, 2 ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಗೆಅಮೆರಿಕ–ಇರಾನ್ ಉದ್ವಿಗ್ನತೆ ತೀವ್ರ: ಹೊಸ ಅಸ್ತ್ರ ಅನಾವರಣ ಎಚ್ಚರಿಕೆಸಂಜಯ ಗಾಂಧಿ ಹೆಸರಿನ ಸಂಸ್ಥೆಗಳ ಮರುನಾಮಕರಣ