LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳನ್ನು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯಶಿಕ್ಷಕ ಅಮಾನತು

ಬೆಳ್ತಂಗಡಿ: ತಾಲ್ಲೂಕಿನ ಬಳಂಜ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್‌ ಲಾರಿಯಲ್ಲಿ ಹತ್ತಿಸಿಕೊಂಡು ನರ್ಸರಿಗೆ ಅಧ್ಯಯನಕ್ಕೆ ಕರೆದೊಯ್ದ ಬಗ್ಗೆ ಅದೇ ಗ್ರಾಮದ ಧರಣೇಂದ್ರ ಅವರು ದೂರು ನೀಡಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಬಳಂಜದ ಪ್ರಭಾರ ಮುಖ್ಯಶಿಕ್ಷಕ ಕಿರಣ್‌ ಅವರು ವಿದ್ಯಾರ್ಥಿಗಳನ್ನು ಟಿಪ್ಪರ್‌ ಲಾರಿಯಲ್ಲಿ ಹತ್ತಿಸಿಕೊಂಡು ಅಧ್ಯಯನಕ್ಕೆ ಕರೆದೊಯ್ದಿದ್ದರು. ಅವರನ್ನು ಅಮಾನತು ಮಾಡಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಎಚ್‌.ಎಸ್.ಶಶಿಧರ್ ತಿಳಿಸಿದ್ದಾರೆ.



ಬಳಂಜ ಶಾಲೆಯಲ್ಲಿ ಈಚೆಗೆ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗಿತ್ತು. ಇದಕ್ಕಾಗಿ ಕಿರಣ್‌ ಅವರ ಪ್ರಯತ್ನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಅವರು ವಿದ್ಯಾರ್ಥಿಗಳನ್ನು ಜೇನ್ನೊಣಗಳ ಅಧ‌ಯನಕ್ಕಾಗಿ ನಾಲ್ಕೂರಿನ ಅನಿಲ್ ಫಾರ್ಮ್‌ ನರ್ಸರಿಗೆ ಮಂಗಳವಾರ ಕರೆದೊಯ್ದಿದ್ದರು. ಮಕ್ಕಳು ಟಿಪ್ಪರ್‌ ಲಾರಿಯಲ್ಲಿ ಪ್ರಯಾಣಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಮಕ್ಕಳ ಸುರಕ್ಷತೆಗೆ ಅಧ್ಯಾಪಕರು ಕ್ರಮ ವಹಿಸದ ಬಗ್ಗೆ ಟೀಕೆ ವ್ಯಕ್ತವಾಗಿತ್ತು.



ಮಕ್ಕಳನ್ನು ಲಾರಿಯಲ್ಲಿ ಹತ್ತಿಸಿಕೊಂಡು ಕರೆದೊಯ್ದ ಶಾಲೆಯವರ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ