LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಕೆ: ಬೆಳಗಾವಿ ಸೇರಿ ೫ ಜಿಲ್ಲೆಗಳಿಗೆ ರೆಡ್ ಅಲರ್ಟ್; ಭೂಕುಸಿತದ ಎಚ್ಚರಿಕೆ

ಬೆಂಗಳೂರು, ಜು.೮: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇನ್ನೂ ವಾರಾಂತ್ಯದವರೆಗೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ ಘೋಷಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಜುಲೈ ೮ರಂದು ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ೨೦೪.೪ ಮಿಲಿಮೀಟರ್‌ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ ೫೦ರಿಂದ ೬೦ ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ನದಿ ಹಾಗೂ ಹಳ್ಳ-ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗುವುದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವುದು ಮತ್ತು ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಜುಲೈ ೭ರಿಂದ ೧೧ರವರೆಗೆ ಪಶ್ಚಿಮ ಘಟ್ಟ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ.

ಜುಲೈ ೯ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ೧೧೫ರಿಂದ ೨೦೪.೪ ಮಿಲಿಮೀಟರ್ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಸಾಮಾನ್ಯವಾಗಿ ೬೪ರಿಂದ ೧೧೫ ಮಿಲಿಮೀಟರ್ವರೆಗೆ ಭಾರೀ ಮಳೆಯೂ ದಾಖಲಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಇದರ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ ೯ ಮತ್ತು ೧೦ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ ೯ರಂದು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜುಲೈ ೮ ಮತ್ತು ೯ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ೬೪ರಿಂದ ೧೧೫ ಮಿಲಿಮೀಟರ್ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು, ಗುಡ್ಡಗಾಡು ಪ್ರದೇಶಗಳ ಜನರು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ವಿಶೇಷ ಎಚ್ಚರಿಕೆ ವಹಿಸಬೇಕು. ಪ್ರವಾಹ ಅಥವಾ ಭೂಕುಸಿತದ ಅಪಾಯ ಇರುವ ಪ್ರದೇಶಗಳಿಗೆ ತೆರಳದಂತೆ, ಜಲಾವೃತ ರಸ್ತೆ ಹಾಗೂ ಸೇತುವೆಗಳನ್ನು ದಾಟಲು ಪ್ರಯತ್ನಿಸದಂತೆ ಮತ್ತು ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮನವಿ ಮಾಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ