LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದೇವಾಲಯಗಳಲ್ಲಿ ಮೊಬೈಲ್ ನಿಷೇಧಕ್ಕೆ ಹೈಕೋರ್ಟ ಆದೇಶ

ಚೆನ್ನೈ: ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ ಶುಕ್ರವಾರ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಆದೇಶಿಸಿದೆ.



ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ನಿಷೇಧಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಎಂ. ಸೀತಾರಾಮನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ ಈ ಆದೇಶ ನೀಡಿದೆ.



ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್​ನಲ್ಲಿ ದೇವರ ವಿಗ್ರಹಗಳು ಮತ್ತು ಪೂಜೆಗಳ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು. ಇದು ಆಗಮಗಳಿಗೆ ವಿರುದ್ಧವಾಗಿರುವುದರಿಂದ ತಿರುಚೆಂದೂರು ದೇವಸ್ಥಾನದೊಳಗೆ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ ಅವರುಗಳು, ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಲು ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು. ಫೋನ್ ಮತ್ತು ಕ್ಯಾಮೆರಾಗಳ ಬಳಕೆಯು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ ಎಂದಿದ್ದಾರೆ.



ಮೊಬೈಲ್ ಫೋನ್‌ಗಳ ಮೇಲಿನ ನಿಷೇಧವನ್ನು ದೇಶಾದ್ಯಂತ ಹಲವು ದೇವಾಲಯಗಳಲ್ಲಿ ಈಗಾಗಲೇ ನಿಷೇಧಿಸಲಾಗಿದೆ. ಗುರುವಾಯೂರ್‌ನಲ್ಲಿರುವ ಶ್ರೀ ಕೃಷ್ಣ ದೇವಾಲಯ, ತಿರುಪತಿಯ ಶ್ರೀ ವೆಂಕಟೇಶ್ವರ ದೇವಾಲಯ ಇದರಲ್ಲಿ ಸೇರಿವೆ. ಈ ನಿಯಮವನ್ನು ಆ ದೇವಾಲಯಗಳಲ್ಲಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ