LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮೆದಾಂತ ಆಸ್ಪತ್ರೆಗೆ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ

ಹೊಸದಿಲ್ಲಿ, ಜುಲೈ 21: ಹಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚುಕ ಅವರನ್ನು ಸಫ್ದರಜಂಗ್ ಆಸ್ಪತ್ರೆಯಿಂದ ಅವರು ಬಯಸಿರುವ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿತು.

ವಾಂಗ್ಚುಕ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೊ, ಸಫ್ದರಜಂಗ್ ಆಸ್ಪತ್ರೆಯಿಂದ ತಮ್ಮ ಪತಿಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ತಿರಸ್ಕರಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ವಾಂಗ್ಚುಕ ಪರ ಹಿರಿಯ ವಕೀಲ ಅಖಿಲ್ ಸಿಬಲ್ ವಾದ ಮಂಡಿಸಿ, ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿರುವ ಹಾಗೂ ಸ್ವತಃ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ ವ್ಯಕ್ತಿಗೆ ತಾನು ಎಲ್ಲಿ ಚಿಕಿತ್ಸೆ ಪಡೆಯಬೇಕು ಎಂಬುದನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಬಂಧನದಲ್ಲಿಲ್ಲದ ವ್ಯಕ್ತಿಯ ವೈದ್ಯಕೀಯ ಸ್ವಾಯತ್ತತೆಯನ್ನು ಗೌರವಿಸಬೇಕು. ಚಿಕಿತ್ಸೆಯ ಪ್ರತಿಯೊಂದು ಹಂತವೂ ಪಾರದರ್ಶಕವಾಗಿರಬೇಕು ಎಂದು ಅವರು ವಾದಿಸಿದರು.

ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ವ್ಯಕ್ತಿಯ ವೈಯಕ್ತಿಕ ನಿರ್ಧಾರದ ಹಕ್ಕು ಮಹತ್ವದ್ದಾದರೂ, ಜೀವ ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು. ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿದೆ ಎಂದು ಅವರು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ