LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಸಮಸ್ಯೆ ಬಗೆಹರಿಸುವ ಭರವಸೆ

ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.



ವಕೀಲ ಬಿ.ಡಿ. ಹಿರೇಮಠ ನೇತೃತ್ವದಲ್ಲಿ ಬೇಡ ಜಂಗಮ ಸಮುದಾಯದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



ಅಡ್ವೊಕೇಟ್ ಜನರಲ್ ಜೊತೆಗೆ ಚರ್ಚಿಸಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಅ. 18 ರಂದು ಕೈಗೊಂಡಿರುವ ಪ್ರತಿಭಟನೆ ಹಿಂಪಡೆಯಬೇಕು ಎಂದು ತಿಳಿಸಿದ್ದಾರೆ.



ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದ್ದು, ಇದನ್ನು ನಿವಾರಿಸಿ ಕಾನೂನು ರೀತಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮಾಡಿದ ಮನವಿಗೆ ಸಿಎಂ ಅಗತ್ಯಕ್ರಮದ ಭರವಸೆ ನೀಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ