LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೇರೆ ಯುವತಿಯೊಂದಿಗೆ ಸಂಬಂಧ; ಪತ್ನಿಗೆ ಎಚ್ ಐವಿ ಇಂಜೆಕ್ಷನ್ ಕೊಟ್ಟ ಪತಿ

ವಿಜಯವಾಡ: ವ್ಯಕ್ತಿಯೊಬ್ಬ ಪತ್ನಿಗೆ ಹೆಚ್‌ಐವಿ ಚುಚ್ಚುಮದ್ದು ನೀಡಿದ್ದಾನೆ. ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಇಂತಹ ಕೃತ್ಯವೆಸಗಿದ್ದಾನೆ. ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.





ತಾಡೆಪಲ್ಲಿಯ ಚರಣ ಎಂಬಾತ ಪತ್ನಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಆತನ ಪತ್ನಿ ದೂರು ನೀಡಿದ ನಂತರ, ತಾಡೆಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗಾಗಿ ಎಂ. ಚರಣ(40) ನನ್ನು ವಶಕ್ಕೆ ಪಡೆದಿದ್ದಾರೆ.



ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ತಾನು ಎಚ್‌ಐವಿ ಪಾಸಿಟಿವ್ ಎಂದು ಇತ್ತೀಚೆಗಷ್ಟೇ ತಿಳಿದುಕೊಂಡಿದ್ದೇನೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಆರೋಪಿಯು ತನ್ನನ್ನು ದೂರ ಮಾಡಲು ಯೋಜನೆ ರೂಪಿಸಿದ್ದ. ಉತ್ತಮ ಆರೋಗ್ಯಕ್ಕಾಗಿ ಚುಚ್ಚುಮದ್ದನ್ನು ನೀಡುವುದಾಗಿ ಭರವಸೆ ನೀಡಿ ಎಚ್ಐವಿ ಇಂಜೆಕ್ಷನ್ ನೀಡಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.



ದಂಪತಿಗೆ ಒಬ್ಬ ಮಗಳಿದ್ದಾಳೆ. ಮದುವೆಯ ನಂತರ ಅನ್ಯೋನ್ಯವಾಗಿದ್ದರು, ಕೆಲವು ವರ್ಷಗಳ ನಂತರ ಪತಿ ಚರಣ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ. 2018 ರಿಂದ ಗಂಡು ಮಗುವನ್ನು ಹೊಂದುವಂತೆ ಒತ್ತಾಯಿಸುತ್ತಿದ್ದ. ತನ್ನ ಪತಿ ವಿಶಾಖಪಟ್ಟಣಂನ 21 ವರ್ಷದ ಯುವತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದನೆಂದು ಪತ್ನಿ ತಿಳಿಸಿದ್ದಾಳೆ.



ಅವನು ತನ್ನನ್ನು ಬಿಡುವಂತೆ ಕಿರುಕುಳ ಮತ್ತು ಒತ್ತಡ ಹೇರಲು ಪ್ರಾರಂಭಿಸಿದ್ದ. ಸಂತ್ರಸ್ತೆ ಇತ್ತೀಚೆಗೆ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಆಕೆಗೆ ಏಡ್ಸ ಇರುವುದು ಪತ್ತೆಯಾಗಿದೆ. ಶುಕ್ರವಾರ ತಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು