LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾನೂನು ಚೌಕಟ್ಟಿನಲ್ಲೇ ಮೇಕೆದಾಟು ಯೋಜನೆ ಅನುಷ್ಠಾನ: ಡಿ.ಕೆ. ಶಿವಕುಮಾರ

ಬೆಂಗಳೂರು, ನ. 19: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇಡೀ ಕರ್ನಾಟಕ ಪಕ್ಷಭೇದ ಮರೆತು ಒಂದಾಗಿದೆ. ಕಾನೂನು ಚೌಕಟ್ಟಿನಲ್ಲೇ ಯೋಜನೆಯನ್ನು ಜಾರಿಗೊಳಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ ರಾಜ್ಯದ ಪರವಾಗಿ ತೀರ್ಪು ನೀಡಿದ್ದು, ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನೂ ವಜಾಗೊಳಿಸಿದೆ. ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿರುವಾಗ ತಮಿಳುನಾಡು ಮತ್ತೆ ತಕರಾರು ತೆಗೆಯುವುದು ಸರಿಯಲ್ಲ ಎಂದರು.

ಕಾವೇರಿ ನೀರಿಗೆ ಸಂಬಂಧಿಸಿದಂತೆ ತಮಿಳುನಾಡು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಕರ್ನಾಟಕ ಆಕ್ಷೇಪಿಸಿಲ್ಲ. ಮೇಕೆದಾಟು ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಒಂದಿಬ್ಬರು ರಾಜಕೀಯ ಅಸೂಯೆಯಿಂದ ಮಾತನಾಡಿರಬಹುದು. ಆದರೆ ಯೋಜನೆ ಅನುಷ್ಠಾನದ ವಿಚಾರದಲ್ಲಿ ರಾಜ್ಯದ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ತಿಳಿಸಿದರು.

ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವುದರ ಜೊತೆಗೆ ಮೈಸೂರು, ಹಾಸನ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಿಗೂ ಪ್ರಯೋಜನವಾಗಲಿದೆ ಎಂದರು.

ಯೋಜನೆಯಡಿ ಸಂಗ್ರಹಿಸುವ ನೀರನ್ನು ಕರ್ನಾಟಕ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಿದ್ದು, ಕೃಷಿಗೆ ಬಳಸುವುದಿಲ್ಲ. ತಮಿಳುನಾಡಿಗೂ ಅದರ ಪಾಲಿನ ನೀರು ದೊರೆಯಲಿದೆ. ಹೀಗಾಗಿ ಯೋಜನೆಗೆ ಅನಗತ್ಯ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಶಿವಕುಮಾರ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST