LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸಿಲುಕಿ ಯುವಕನ ಮುಖಕ್ಕೆ ಗಂಭೀರ ಗಾಯ

ಹುಬ್ಬಳ್ಳಿ, ಅ. 24 (ಸಮದರ್ಶಿ ಸುದ್ದಿ): ನಗರದಲ್ಲಿ ಅಪಾಯಕಾರಿ ಮಾಂಜಾ ದಾರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ ಮತ್ತೊಂದು ಅವಘಡ ಸಂಭವಿಸಿದ್ದು, ಉಣಕಲ್ ಪ್ರದೇಶದಲ್ಲಿ ಯುವಕನೊಬ್ಬನ ಮುಖಕ್ಕೆ ದಾರ ತಗುಲಿ ಗಂಭೀರ ಗಾಯಗಳಾಗಿವೆ.

ಬುಧವಾರ ಸಂಜೆ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಯುವಕನ ಮುಖಕ್ಕೆ ಮಾಂಜಾ ದಾರ ಸಿಲುಕಿದ ಪರಿಣಾಮ ಮೂಗು ಹಾಗೂ ಕಣ್ಣಿನ ಸುತ್ತಲಿನ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯಗಳ ತೀವ್ರತೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಇದೇ ನಗರದಲ್ಲಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆ ಘಟನೆಯ ಆತಂಕ ಕಡಿಮೆಯಾಗುವ ಮುನ್ನವೇ ಮತ್ತೊಬ್ಬ ಯುವಕ ಗಾಯಗೊಂಡಿರುವುದು ಸಾರ್ವಜನಿಕರಲ್ಲಿ ಕಳವಳ ಮೂಡಿಸಿದೆ.

ಗಾಜಿನ ಪುಡಿ ಹಾಗೂ ಅಪಾಯಕಾರಿ ವಸ್ತುಗಳಿಂದ ತಯಾರಿಸುವ ಮಾಂಜಾ ದಾರಗಳು ವಾಹನ ಸವಾರರು ಮತ್ತು ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ. ಇಂತಹ ದಾರಗಳ ಮಾರಾಟ ಹಾಗೂ ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ನಿಷೇಧಿತ ಮಾಂಜಾ ದಾರಗಳ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಿನಿ ರಜನೀಶ ಸೇರಿ 6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಆಗ್ರಹಅಶಾಂತಿಗೆ ಇಸ್ರೇಲ್ ಆಕ್ರಮಣವೇ ಕಾರಣ: 4 ರಾಷ್ಟ್ರಗಳ ಜಂಟಿ ಹೇಳಿಕೆವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲಕಾನೂನಿನ ಭಯವೇ ಇಲ್ಲವೇ?: ಉದ್ರಿ ನೀಡಲು ನಿರಾಕರಿಸಿದ್ದಕ್ಕೆ ಹೋಟೆಲ್ ಮಾಲಕನ ಹತ್ಯೆಗೋಲ್ಡನ್ ಚಾರಿಯಟ್ ರೈಲಿಗೆ ಮರುಚಾಲನೆ: ಟಿಕೆಟ್ ದರ 3.5 ಲಕ್ಷದಿಂದ 4.4 ಲಕ್ಷ ರೂ.ಪೆಲೆಟ್ ಗನ್ ಬಳಕೆ, ಮಹಿಳೆಯರಿಗೆ ಕಿರುಕುಳ : ಸುಪ್ರೀಂ ಕೋರ್ಟ ಸಮಿತಿಯಿಂದ ವಿಚಾರಣೆಸಿದ್ದರಾಮಯ್ಯ ಕುಟುಕು ಕಾರ್ಯಾಚರಣೆ : ದೆಹಲಿಯ ರಿತೇಶ ಪಾಂಡೆ ಬಂಧನಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸಿಲುಕಿ ಯುವಕನ ಮುಖಕ್ಕೆ ಗಂಭೀರ ಗಾಯಚಿರತೆ ಸೆರೆ ವೇಳೆ ಅರಣ್ಯ ಇಲಾಖೆ ವೈದ್ಯರ ಮೇಲೆ ಹಲ್ಲೆ: 15 ಮಂದಿ ವಿರುದ್ಧ ಪ್ರಕರಣಸರ್ಕಾರವನ್ನು ಪ್ರಶ್ನಿಸಿದರೆ ಶಾಂತಿ ಭಂಗವೇ?: ಬಾಂಡ್‌ಗೆ ಸಹಿ ಹಾಕಲು ನೇಹಾ ಬೋರಾ ನಿರಾಕರಣೆ