LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಭಾರತ ಜಗತ್ತಿಗೆ ಅಭಿವೃದ್ಧಿಯ ಹೊಸ ಸೂತ್ರ ತೋರಿಸುತ್ತಿದೆ : ಪ್ರಧಾನಿ ಮೋದಿ

ಆಕ್ಲೆಂಡ್: ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ದೇಶದ ಬೆಳವಣಿಗೆ ಇಂದು ಇಡೀ ಜಗತ್ತಿಗೆ ಹೊಸ ಅಭಿವೃದ್ಧಿಯ ಸೂತ್ರವನ್ನು ಪರಿಚಯಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನ್ಯೂಝಿಲೆಂಡ್ ಪ್ರವಾಸದಲ್ಲಿರುವ ಅವರು ಶನಿವಾರ ಆಕ್ಲೆಂಡ್‌ನಲ್ಲಿ ನಡೆದ 'ಕಿಯಾ ಓರಾ ಮೋದಿ' ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ನ್ಯೂಝಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಕೂಡ ಉಪಸ್ಥಿತರಿದ್ದರು.

"ಭಾರತ–ನ್ಯೂಝಿಲೆಂಡ್ ಸ್ನೇಹವು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಪರಸ್ಪರ ವಿಶ್ವಾಸದ ಮೇಲೆ ನಿಂತಿದೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳಾಗಿವೆ" ಎಂದು ಮೋದಿ ಹೇಳಿದರು.

"ಜಗತ್ತಿನಲ್ಲಿ ಅನಿಶ್ಚಿತತೆ ಇದ್ದರೂ ಭಾರತ ಹಿಂದೆಂದೂ ಕಾಣದ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ನಾವು ಕೇವಲ ಪ್ರಗತಿ ಸಾಧಿಸುತ್ತಿಲ್ಲ, ಜಗತ್ತಿಗೆ ಅಭಿವೃದ್ಧಿಯ ಹೊಸ ಸೂತ್ರವನ್ನೂ ತೋರಿಸುತ್ತಿದ್ದೇವೆ" ಎಂದು ಅವರು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ