LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಭಾರತ ಜೋಡೋ ಯಾತ್ರೆ ವಿರುದ್ಧ ಬೊಮ್ಮಾಯಿ ಕಿಡಿ

ಬೆಂಗಳೂರು:, ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಳ್ಳಾರಿ ಬಿಟ್ಟು ರಾಯಬರೇಲಿ ಕ್ಷೇತ್ರಕ್ಕೆ ಹೋದರು. ಸೋನಿಯಾ ಅವರು ಬಳ್ಳಾರಿ ಜನರಿಗೆ ಕೃತಜ್ಞತೆ ಹೇಳಲೂ ಬರಲಿಲ್ಲ ಎಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಪಾದಯಾತ್ರೆ ಕುರಿತು ಕಿಡಿಕಾರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದರು.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಬೊಮ್ಮಾಯಿ, ಬಳ್ಳಾರಿಯಲ್ಲಿ ಕಾಂಗ್ರೆಸ್ ಭಾರತ ಜೋಡೋ ಯಾತ್ರೆ ನಡೆಯುತ್ತಿದೆ. ಬಳ್ಳಾರಿ ಕ್ಷೇತ್ರದಲ್ಲಿ ನಿಂತಿದ್ದ ಸೋನಿಯಾ ಗಾಂಧಿ ಅಲ್ಲಿನ ಜನತೆಗೆ ಕೃತಜ್ಞತೆ ಹೇಳಲೂ ಬರಲಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಅಲ್ಲಿ ಪಾದಯಾತ್ರೆ, ಸಮಾವೇಶ ಮಾಡುತ್ತಿದ್ದಾರೆ? ಇಂದು ದೇಶ ಬಲಿಷ್ಠವಾಗಿ ಒಗ್ಗಟ್ಟಾಗಿದೆ. ಹಾಗಿರುವಾಗ ಇವರ ಜೋಡೋ ಯಾತ್ರೆ ಯಾಕೆ ಬೇಕು? ಎಂದು ಪ್ರಶ್ನಿಸಿದರು.



ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ನನಗೆ 4 ಕಿ.ಮೀ. ನಡೆದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಖಂಡಿತ ನಡೆದು ತೋರಿಸೋಣ. ಸಿದ್ದರಾಮಯ್ಯ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನಾನು ಸಿದ್ದರಾಮಯ್ಯ ಮಟ್ಟಕ್ಕೆ ಇಳಿಯಲ್ಲ. ಆರೋಗ್ಯ ಚೆನ್ನಾಗಿರಲಿ, 100 ವರ್ಷ ಬಾಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ