LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಅವಮಾನ

ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಅಪರಿಚಿತರು ಮಸಿ ಹಚ್ಚಿರುವ ಕುರಿತು ದೂರು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.



ಮೊದಲಿದ್ದ ರಾಯಣ್ಣ ಮೂರ್ತಿ ಕಪ್ಪು ಬಣ್ಣವೇ ಇತ್ತು. ಅದರ ಮೇಲೆ ಮತ್ತೆ ಕರಿಮಸಿ ಸುರಿದಿದ್ದಾರೆ. ಕೆಲವು ಕಾಲ ಇದನ್ನು ಯಾರು ಗಮನಿಸಿರಲಿಲ್ಲ. ಆದರೆ ರಾತ್ರಿ ಇದು ಕೆಲ ಯುವಕರ ಗಮನಕ್ಕೆ ಬಂದಿದೆ. ತಕ್ಷಣ ಯುವಕರು ಸ್ಥಳದಲ್ಲಿ ಸೇರಿ ಘೋಷಣೆ ಕೂಗಿದರು.



ದೂರು ಸ್ವೀಕರಿಸಿದ ತಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



ಪ್ರತಿಮೆಯ ಮೇಲಿದ್ದ ಮಸಿಯ ಮಾದರಿಯನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳದ ಸಮೀಪದಲ್ಲೇ ಸುಮಾರು 10 ಮೀಟರ್ ದೂರದಲ್ಲಿ ಸಿಸಿಟಿವಿ ಕ್ಯಾಮೆರಾ ಇರುವುದರಿಂದ ಅದರ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ದೂರುದಾರರನ್ನು ವಿಚಾರಣೆಗೊಳಪಡಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ