LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಮದುವೆಗೆ ಅಡ್ಡಿ: 9 ವರ್ಷಗಳ ಪ್ರೇಮ ಸಂಬಂಧ ಕೊಲೆಯಲ್ಲಿ ಅಂತ್ಯ

ಚಿಕ್ಕೋಡಿ, ನ. 28: ಬೇರೊಬ್ಬ ಯುವತಿಯನ್ನು ಮದುವೆಯಾಗಲು ವಿರೋಧ ವ್ಯಕ್ತಪಡಿಸುತ್ತಿದ್ದಳೆಂಬ ಕಾರಣಕ್ಕೆ ಪ್ರಿಯತಮೆಯನ್ನೇ ಕೊಲೆ ಮಾಡಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಕೊಲೆಯಾದ ಮಹಿಳೆಯನ್ನು ಐರಾವತಿ ಖೋತ (38) ಎಂದು ಗುರುತಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ನರೇನೂರು ಗ್ರಾಮದ ಸಂಜಯ ಚವ್ಹಾಣ (28) ಬಂಧಿತ ಆರೋಪಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಸಂಜಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಐರಾವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದು ಸುಮಾರು 9 ವರ್ಷಗಳಿಂದ ಸಂಬಂಧ ಮುಂದುವರಿದಿತ್ತು ಎನ್ನಲಾಗಿದೆ.

ಈ ನಡುವೆ ಸಂಜಯ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ. ಈ ಹಿಂದೆ ಎರಡು ಬಾರಿ ಆತನಿಗೆ ಮದುವೆ ಸಂಬಂಧ ನಿಶ್ಚಯವಾಗಿದ್ದರೂ ಐರಾವತಿ ಅದನ್ನು ತಪ್ಪಿಸಿದ್ದಳು ಎನ್ನಲಾಗಿದೆ. ಮೂರನೇ ಬಾರಿಯೂ ಮದುವೆ ನಿಶ್ಚಯವಾದಾಗ ತನ್ನನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗಬಾರದು ಎಂದು ಐರಾವತಿ ಪಟ್ಟು ಹಿಡಿದಿದ್ದಳು. ಇದೇ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಸಂಜಯ ಕೊಲೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಬೈಲ್ ಕರೆಗಳಿಂದ ಕೊಲೆ ರಹಸ್ಯ ಬಯಲು

ನ. 14ರಂದು ತೋರಣಹಳ್ಳಿಯ ದೇವಸ್ಥಾನಕ್ಕೆ ತೆರಳಿದ್ದ ಐರಾವತಿ ಮನೆಗೆ ಮರಳಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಐರಾವತಿಯ ಮೊಬೈಲ್ ಕರೆಗಳ ವಿವರಗಳನ್ನು ಆಧರಿಸಿ ಸಂಜಯನನ್ನು ಪತ್ತೆಹಚ್ಚಿದ್ದರು. ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲು ಮತ್ತು ಬಿಯರ್ ಬಾಟಲಿಯಿಂದ ಐರಾವತಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಆರೋಪಿ, ಬಳಿಕ ಚನ್ಯಾನದಡ್ಡಿ ಗ್ರಾಮದ ಹೊರವಲಯದ ಕಾಡಿನಲ್ಲಿ ಮೃತದೇಹ ಎಸೆದು ಪರಾರಿಯಾಗಿದ್ದ ಎನ್ನಲಾಗಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ಸಂಪೂರ್ಣ ಕೊಳೆತು ಮೂಳೆಗಳು ಹಾಗೂ ಬಟ್ಟೆಗಳು ಮಾತ್ರ ಉಳಿದಿದ್ದವು. ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

ಆರೋಪಿ ಸಂಜಯನನ್ನು ಬಂಧಿಸಿರುವ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST