LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
International News

ವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ

ಕುವೈತ್‌: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ನಡೆಸಿದ ವಾಯುದಾಳಿಗೆ ಪ್ರತಿಯಾಗಿ ಬಹರೈನ್‌ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ದಾಳಿಯ ಹಿನ್ನೆಲೆಯಲ್ಲಿ ಬಹರೈನ್‌ ಮತ್ತು ಕುವೈತ್‌ನ ಹಲವು ಪ್ರದೇಶಗಳಲ್ಲಿ ಸೈರನ್‌ಗಳು ಮೊಳಗಿದ್ದು, ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ಐಆರ್‌ಜಿಸಿ ಪ್ರಕಟಿಸಿದ ಹೇಳಿಕೆಯಲ್ಲಿ, ಬಹರೈನ್‌ನಲ್ಲಿರುವ ಅಮೆರಿಕದ ಐದನೇ ನೌಕಾಪಡೆ ನೆಲೆ, ಬಂದರ್ ಸಲ್ಮಾನ್ ಪ್ರದೇಶದ ಅಮೆರಿಕದ ಮಿಲಿಟರಿ ಕೇಂದ್ರ ಹಾಗೂ ಕುವೈತ್‌ನ ಅಲಿ ಅಲ್ ಸಲೇಮ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಕಾರ್ಯಾಚರಣೆಗೆ ಅಡ್ಡಿಪಡಿಸಲು ಯತ್ನಿಸುತ್ತಿದ್ದ ಅಮೆರಿಕದ ಎಂಕ್ಯೂ-9 ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿಯೂ ಐಆರ್‌ಜಿಸಿ ಹೇಳಿಕೊಂಡಿದೆ.

ಹಾರ್ಮುಝ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗೆ ಪ್ರತಿಯಾಗಿ ಅಮೆರಿಕ ದಕ್ಷಿಣ ಇರಾನ್‌ನ ಹಲವು ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಈಗಾಗಲೇ ಎಚ್ಚರಿಕೆ ನೀಡಿದ್ದು, ಇತ್ತೀಚಿನ ದಾಳಿಯು ಅದೇ ಎಚ್ಚರಿಕೆಯ ಮುಂದುವರಿದ ಭಾಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ