LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಹವಾಲುಗಳ ತ್ವರಿತ ಪರಿಹಾರಕ್ಕೆ ನಾಳೆ ಬೆಳಗಾವಿಯಲ್ಲಿ ಜನತಾ ದರ್ಶನ

ಬೆಳಗಾವಿ, ಸೆ.25 : ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಅವುಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನೆಹರೂ ನಗರದ ಕೆಪಿಟಿಸಿಎಲ್ ಭವನದಲ್ಲಿ ಜಿಲ್ಲಾ ಮಟ್ಟದ "ಜನತಾ ದರ್ಶನ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.



ಜನತಾ ದರ್ಶನ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿಗಳು ಭಾಗವಹಿಸಲಿದ್ದಾರೆ.



ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆ( ಐಪಿಜಿಆರ್ ಎಸ್ ) ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಿದ ಬಳಿಕ ನಿಗದಿತ ಕಾಲಮಿತಿಯಲ್ಲಿ ಅವುಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವಿಲೇವಾರಿ ಮಾಡಬೇಕಾಗುತ್ತದೆ‌ ಆದ್ದರಿಂದ ಪ್ರತಿಯೊಂದು ಅರ್ಜಿ ವಿಲೇವಾರಿಗೆ ತ್ವರಿತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.



ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವುಗಳ ವಿಲೇವಾರಿಗೆ ಸಮರ್ಪಕ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.



ಮುಖ್ಯಮಂತ್ರಿಗಳ ನಿರ್ದೇಶನದಂತೆ ಜನತಾದರ್ಶನ ಹಮ್ಮಿಕೊಳ್ಳಲಾಗಿರುತ್ತದೆ. ಆದ್ದರಿಂದ ಪ್ರತಿಯೊಂದು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.



ಜನತಾ ದರ್ಶನದಲ್ಲಿ ಊಟದ ವ್ಯವಸ್ಥೆ:



ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲೆಯ ಸಾರ್ವಜನಿಕರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.



ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ:



"ಜನತಾ ದರ್ಶನ" ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಕೂಡ ಫಲಾನುಭವಿಗಳಿಗೆ ವಿತರಿಸಲಾಗುವುದು.

ಆದ್ದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸೌಲಭ್ಯಗಳನ್ನು ವಿತರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿರ್ದೇಶನ ನೀಡಿದರು.



ಆರೋಗ್ಯ, ಕೃಷಿ, ತೋಟಗಾರಿಕೆ, ಕಾರ್ಮಿಕ, ಸಮಾಜಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಸೌಲಭ್ಯಗಳನ್ನು ವಿತರಿಸಲಿವೆ.



ಸಭೆಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಎಲ್ಲ ಇಲಾಖೆಯ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕಾರ್ಯಕ್ರಮ ಯಶಸ್ಚಿಗೊಳಿಸಬೇಕು ಎಂದು ತಿಳಿಸಿದರು.

ಈಗಾಗಲೇ ಕೆಪಿಟಿಸಿಎಲ್ ಭವನದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆಗೆ ಆಯಾ ಇಲಾಖೆಯ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.



ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಎಂಟು ಕೌಂಟರ್ ಗಳನ್ನು ಸ್ಥಾಪಿಸಲಾಗುವುದು. ಅರ್ಜಿ ಸ್ವೀಕರಿಸಿದ ಕೂಡಲೇ ಅದನ್ನು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಲಾಗುವುದು ಎಂದು ಅಶೋಕ ದುಡಗುಂಟಿ ವಿವರಿಸಿದರು.



ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಎಸಿಪಿ ಕಟ್ಟಿಮನಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು