LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆ

ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಒಂದೂವರೆ ವರ್ಷದ ಮಗುವನ್ನು ಅತ್ಯಂತ ಕ್ರೂರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಜಿತೇಂದ್ರ ಅಲಿಯಾಸ್ ವಿರಾಜ್ (25)ಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಘಟನೆ ನಡೆದ ಕೇವಲ 40 ದಿನಗಳಲ್ಲೇ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸಿರುವುದು ಗಮನಾರ್ಹವಾಗಿದೆ.

ಪ್ರಕರಣದ ವಿವರಗಳ ಪ್ರಕಾರ, ಕಿರಾಣಿ ಅಂಗಡಿ ನಡೆಸುತ್ತಿದ್ದ ಜಿತೇಂದ್ರನಿಗೆ 24 ವರ್ಷದ ಶಿಕ್ಷಕಿ ರತಿದೇವಿ ಅವರ ಮೇಲೆ ಪ್ರೀತಿ ಇತ್ತು. ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದ ಪತಿಯಿಂದ ದೂರವಿದ್ದು ತಂದೆಯ ಮನೆಯಲ್ಲಿ ವಾಸಿಸುತ್ತಿದ್ದ ರತಿದೇವಿ, ತಮಗೆ ಈಗಾಗಲೇ ಮದುವೆಯಾಗಿದ್ದು, ಒಂದೂವರೆ ವರ್ಷದ ಗಂಡು ಮಗು (ಆರವ್) ಇದೆ ಎಂದು ತಿಳಿಸಿ ಜಿತೇಂದ್ರನ ಮದುವೆ ಪ್ರಸ್ತಾಪವನ್ನು ಹಲವು ಬಾರಿ ತಿರಸ್ಕರಿಸಿದ್ದರು.

ಈ ನಿರಾಕರಣೆಯಿಂದ ಆಕ್ರೋಶಗೊಂಡ ಜಿತೇಂದ್ರ, ಮಗುವೇ ತನ್ನ ಮದುವೆಗೆ ಅಡ್ಡಿಯಾಗಿದೆ ಎಂದು ಭಾವಿಸಿ ಕೊಲೆ ಸಂಚು ರೂಪಿಸಿದ್ದನೆಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಕಳೆದ ಮೇ 31ರಂದು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆರವ್‌ನನ್ನು ಕರೆದುಕೊಂಡು ಹೋದ ಆರೋಪಿ, ಬಳಿಕ ಮಗುವನ್ನು ನೆಲಕ್ಕೆ ಬಡಿದು ಹತ್ಯೆಗೈದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಬಂಧನದ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಣ ಪೊಲೀಸರ ಗುಂಡೇಟಿಗೆ ಆತನ ಕಾಲಿಗೆ ಗಾಯವಾಗಿತ್ತು.

ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ, ಮಗುವಿನ ಮೇಲಿನ ಕ್ರೌರ್ಯ, ಅಪರಾಧದ ಗಂಭೀರತೆ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಜಿತೇಂದ್ರ ಅಲಿಯಾಸ್ ವಿರಾಜ್‌ಗೆ ಮರಣದಂಡನೆ ವಿಧಿಸಿದೆ. ಘಟನೆ ನಡೆದ 40 ದಿನಗಳಲ್ಲೇ ತೀರ್ಪು ಪ್ರಕಟಿಸಿರುವುದು ಉತ್ತರ ಪ್ರದೇಶದ ಇತ್ತೀಚಿನ ತ್ವರಿತ ನ್ಯಾಯಾಂಗ ಪ್ರಕ್ರಿಯೆಗಳಲ್ಲೊಂದು ಎಂದು ಪರಿಗಣಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ