LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತಗಳ್ಳರಿಗೆ ಜ್ಞಾನೇಶ್ ಕುಮಾರ್ ರಕ್ಷಣೆ: ರಾಹುಲ್ ಗಾಂಧಿ

ನವದೆಹಲಿ: ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್‌ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ' ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.



ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು ಎಂದು ಆಗ್ರಹಿಸಿದರು.



ದೇಶದಲ್ಲಿ ಹೇಗೆ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂಬುದನ್ನು ಅರಿಯಲು ಇಂದಿನ ಯುವಸಮುದಾಯಕ್ಕೆ ಇದೊಂದು ಮಹತ್ವದ ಉದಾಹರಣೆಯಾಗಿದೆ. ನಾನು ಈ ಹಿಂದೆ ಭರವಸೆ ನೀಡಿದ ಹೈಡೋಜೆನ್ ಬಾಂಬ್' ಇದಲ್ಲ. ಅದು ಅತಿ ಶೀಘ್ರದಲ್ಲಿ ಬರಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.



ಕರ್ನಾಟಕದ ಅಳಂದದಲ್ಲಿ 2023ರ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಅಳಿಸಿಹಾಕುವ ಯತ್ನ ನಡೆದಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಜುರಾ ಕ್ಷೇತ್ರದಲ್ಲಿ ಸ್ವಯಂಚಾಲಿತ ತಂತ್ರಾಂಶ ಬಳಸಿ ಕುತಂತ್ರದಿಂದ ಮತಗಳನ್ನು ಸೇರಿಸುವ ಪ್ರಯತ್ನ ನಡೆದಿದೆ. ಈ ಎಲ್ಲಾ ಕೃತ್ಯಗಳಿಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಾನು ಗಂಭೀರ ಆರೋಪ ಮಾಡುತ್ತಿದ್ದೇನೆ. ಇದನ್ನು ಹಗುರವಾಗಿ ಪರಿಗಣಿಸಬೇಡಿ. ಚುನಾವಣಾ ಆಯೋಗವು ಮತಗಳ್ಳರನ್ನು ರಕ್ಷಿಸುತ್ತಿದೆ. ಈ ಕಳ್ಳರೇ ಭಾರತದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.



ಭಾರತದಲ್ಲಿ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕನಾಗಿರುವ ನಾನು ಶೇ 100ರಷ್ಟು ಪುರಾವೆಗಳಿಲ್ಲದೆ ಏನನ್ನೂ ಹೇಳುವುದಿಲ್ಲ. ಅಳಂದದಲ್ಲಿ 6,018 ಮತಗಳನ್ನು ಅಳಿಸಿಹಾಕಲು ಯಾರೋ ಪ್ರಯತ್ನಿಸಿದ್ದರು. ಆದರೆ ಕಾಕತಾಳೀಯ ಎಂಬಂತೆ ಸಿಕ್ಕಿಬಿದ್ದರು. ತಮ್ಮ ಚಿಕ್ಕಪ್ಪನ ಹೆಸರೇ ಪಟ್ಟಿಯಲ್ಲಿ ಇಲ್ಲದಿರುವುದನ್ನು ಬೂತ್ ಮಟ್ಟದ ಅಧಿಕಾರಿ ಗಮನಿಸಿದ್ದಾರೆ. ಆದರೆ ಇದರ ಹಿಂದೆ ಬೇರೆ ಯಾವುದೋ 'ಶಕ್ತಿ' ಇದೆ' ಎಂದಿದ್ದಾರೆ.



'ಮತದಾರರಂತೆ ನಟಿಸಿ 6,018 ಅರ್ಜಿಗಳನ್ನು ಸಲ್ಲಿಸಲಾಗಿದೆ. ಕರ್ನಾಟಕಕ್ಕೆ ಸೇರದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ಈ ಅರ್ಜಿಗಳು ಸ್ವಯಂಚಾಲಿತ ತಂತ್ರಾಂಶದ ಮೂಲಕ ದಾಖಲಿಸಿಕೊಳ್ಳಲಾಗಿದೆ' ಎಂದ ರಾಹುಲ್ ಗಾಂಧಿ, ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ವೇದಿಕೆಗೆ ಕರೆದರು.



'ಕಳೆದ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಸಿಐಡಿಯು 18 ಪತ್ರಗಳನ್ನು ಕಳುಹಿಸಿದೆ. ಯಾವ ಪ್ರದೇಶದಿಂದ ಈ ಮತದಾರರ ಹೆಸರು ನೋಂದಣಿಯಾಗಿದೆ ಎಂಬುದಕ್ಕೆ ಪೂರಕವಾದ ಐಪಿ ವಿಳಾಸ ಹಾಗೂ ಅದಕ್ಕೆ ಬಳಸಿದ ಒಟಿಪಿ ಮಾಹಿತಿ ನೀಡುವಂತೆ ಸಿಐಡಿ ಆಯೋಗವನ್ನು ಕೇಳಿದೆ. ಆದರೆ

ಆಯೋಗವು ಅದನ್ನು ಏಕೆ ನೀಡುತ್ತಿಲ್ಲ. ಏಕೆಂದರೆ ಒಂದೊಮ್ಮೆ ಆಯೋಗ ಅದನ್ನು ನೀಡಿದರೆ, ಈ ಕೃತ್ಯದ ಹಿಂದಿರುವ ವ್ಯಕ್ತಿಯ ಮನೆಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸುತ್ತದೆ ಎಂಬುದು ಅವರಿಗೂ ಗೊತ್ತು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.



'ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸುವುದು ಹಾಗೂ ಸೇರಿಸುವುದನ್ನು ಯಾರು ಮಾಡುತ್ತಿದ್ದಾರೆ ಎಂದು ಆಯೋಗಕ್ಕೆ ಗೊತ್ತಿದೆ. ಭಾರತದ ಪ್ರತಿಯೊಬ್ಬ ಯುವಕರೂ ಇದನ್ನು ತಿಳಿಯಬೇಕು ಎಂದು ನಾನು ಬಯಸುತ್ತೇನೆ. ಕೇಳಿದ ಮಾಹಿತಿಯನ್ನು ಅವರು ನೀಡುತ್ತಿಲ್ಲವೆಂದರೆ ಅವರು ಪ್ರಜಾಪ್ರಭುತ್ವದ ಕೊಲೆಗಾರರನ್ನು ರಕ್ಷಿಸುತ್ತಿದ್ದಾರೆ ಎಂದೇ ಅರ್ಥ' ಎಂದು ಆರೋಪಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ