LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಮ ಕೋರ್ಟನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ ನವೆಂಬರ 23 ರಂದು ನಡೆಯಲಿದೆ.



ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜ ದೇಸಾಯಿ ಅವರನ್ನು ನೇಮಕ ಮಾಡಿದೆ.



ಭಾಷಾವಾರು ಪ್ರಾಂತ್ಯ ರಚನೆಗಾಗಿ ಕೇಂದ್ರ ಸರ್ಕಾರ 1953ರಲ್ಲಿ ಫಸಲ್ ಅಲಿ ನೇತೃತ್ವದ ಸಮಿತಿ ರಚನೆಯಾಗಿತ್ತು, 1955ರಲ್ಲಿ ಫಸಲ್ ಅಲಿ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿ ಸೇರಿ 865 ಗಡಿ ಪ್ರದೇಶಗಳು ಮೈಸೂರು ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ವರದಿಯಲ್ಲಿತ್ತು,



ಸುಪ್ರೀಮ ಕೋರ್ಟ ನಿವೃತ್ತ ಮುಖ್ಯನ್ಯಾಯಮೂರ್ತಿ ಮೆಹರಚಂದ ಮಹಾಜನ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ 1967ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.



ಮಹಾಜನ್ ವರದಿಯಲ್ಲೂ ಕೂಡ ಬೆಳಗಾವಿ ಸೇರಿ 865 ಪ್ರದೇಶಗಳು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಉಲ್ಲೇಖವಾಗಿದೆ. 2004ರಲ್ಲಿ ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ತಿರಸ್ಕರಿಸಿ ಸುಪ್ರೀಮ ಕೋರ್ಟ ಮೆಟ್ಟಿಲೇರಿತು,18 ವರ್ಷಗಳ ಬಳಿಕ ಸುಪ್ರಿಮ ಕೋರ್ಟ​ ಗಡಿ-ವಿವಾದ ಸಂಬಂಧ ಸುಪ್ರೀಮ ಕೋರ್ಟನಲ್ಲಿ ನಾಳೆ ವಿಚಾರಣೆ ನಡೆಯಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ