LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಖಾನಾಪುರ ಆನೆಗಳ ಸಾವು: ತನಿಖೆಗೆ ಖಂಡ್ರೆ ಆದೇಶ

ಬೆಂಗಳೂರು, ಅ.3: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ.

ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ