LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ ಮತ್ತು ಗುಮಾಸ್ತನ ಬಂಧನ

ಬೆಳಗಾವಿ : ಖಾತಾ ವರ್ಗಾವಣೆಗೆ 5 ಲಕ್ಷ ರೂ. ಹಣ ಬೇಡಿಕೆಯಿಟ್ಟಿದ್ದ ತಹಶೀಲದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿಯ ಭೂಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ತಡರಾತ್ರಿ ನಡೆದಿದೆ.







ಜಿಲ್ಲೆಯ ಕಿತ್ತೂರು ತಹಶೀಲ್ದಾರರಾದ ಸೋಮಲಿಂಗಪ್ಪ ಹಾಲಗಿ ಹಾಗೂ ಗುಮಾಸ್ತ ಪ್ರಸನ್ನ ಜಿ ಅವರುಗಳು ದೂರುದಾರ ರಾಜೇಂದ್ರ ಇನಾಮದಾರ ಅವರ ತಂದೆಯ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಅವರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಮೊದಲ ಹಂತದಲ್ಲಿ ಎರಡು ಲಕ್ಷ ರೂ. ನೀಡುವುದು ಮತ್ತು ಉಳಿದ ಹಣದ ಶ್ಯೂರಿಟಿಯಾಗಿ 20 ಲಕ್ಷ ರೂಪಾಯಿ ಖಾಲಿ ಚೆಕ್ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು.



 ತಹಶೀಲದಾರರ ಮನೆಯಲ್ಲಿ ಮೊದಲ ಹಂತದಲ್ಲಿ ಎರಡು ಲಕ್ಷ ರೂಪಾಯಿ ಹಣ ಮತ್ತು 20 ಲಕ್ಷ ಚೆಕ್   ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ,‌ ಲಂಚದ ಹಣ ಮತ್ತು ಚೆಕ್ ಸಮೇತ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.



ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರ ಸೂಚನೆಯಂತೆ ಬೆಂಗಳೂರಿನ ಅಪರ್ ಲೋಕಾಯುಕ್ತ ಪೊಲೀಸ ಮಹಾನಿರ್ದೇಶಕರಾದ ಐಪಿಎಸ್ ಪ್ರಶಾಂತಕುಮಾರ ಠಾಕೂರ, ಬೆಳಗಾವಿಯ ಲೋಕಾಯುಕ್ತ ಪೊಲೀಸ ಅಧೀಕ್ಷಕರಾದ ಐಪಿಎಸ್ ಶ್ರೀಮತಿ ಯಶೋದಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಅನ್ನಪೂರ್ಣ ಹುಲಗೂರ ಮತ್ತು ಇತರ ಲೋಕಾಯುಕ್ತ ಪೋಲೀಸರು ಕಾರ್ಯಾಚರಣೆ ನಡೆಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು