LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

Koppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು

ಕೊಪ್ಪಳ, ಮೇ 15 : ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಕೆಳಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಮುನಿರಾಬಾದ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮೃತರನ್ನು ಕೆಂಚಪ್ಪ (35), ಮಹಾಂತೇಶ (18), ಭರತ (1), ಸವಿತಾ (12), ಮಾರೇಶ ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ನಿವಾಸಿಗಳಾಗಿದ್ದಾರೆ ಎನ್ನಲಾಗಿದೆ. ಇವರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 16 ಮಂದಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಟ್ಯಾಂಕರ್‌ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸೇತುವೆಯಿಂದ ಕೆಳಭಾಗಕ್ಕೆ ಬಿದ್ದಿದೆ. ಅಪಘಾತದ ನಂತರ ಟ್ಯಾಂಕರ್‌ ಲಾರಿಯೂ ಸಹ ಕೆಳಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಗೊಂದಲ ಉಂಟಾಗಿದ್ದು, ಗಾಯಾಳುಗಳ ಕಿರುಚಾಟ ಮರ್ಮಭೇದಿಯಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದರು.

ಗಾಯಗೊಂಡವರನ್ನು ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು