LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿಯ 34 ಕೇಂದ್ರಗಳಲ್ಲಿ ಕೆಪಿಎಸ್‌ಸಿ ಪರೀಕ್ಷೆ: 12,244 ಅಭ್ಯರ್ಥಿಗಳು

ಬೆಳಗಾವಿ, ನ. 13: ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಪರೀಕ್ಷೆಯು ನವೆಂಬರ್ 15ರಂದು ಜಿಲ್ಲೆಯ 34 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 12,244 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಅಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಹಾಗೂ ವೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರಶ್ನೆಪತ್ರಿಕೆಗಳು ಮತ್ತು ಉತ್ತರ ಪತ್ರಿಕೆಗಳನ್ನು ಪರೀಕ್ಷೆಯ ಹಿಂದಿನ ದಿನ ಸಿಸಿಟಿವಿ ಕಣ್ಗಾವಲಿನಲ್ಲಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗುವುದು. ಪರೀಕ್ಷೆಯ ದಿನ ಮೊಹರು ಮಾಡಿದ ಪ್ರಶ್ನೆಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ ಒಂಬತ್ತು ಪ್ರತ್ಯೇಕ ಮಾರ್ಗಗಳ ಮೂಲಕ ಕೇಂದ್ರಗಳಿಗೆ ಸಾಗಿಸಲಾಗುವುದು ಎಂದರು.

ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮುಂಚಿತವಾಗಿ ಪ್ರಶ್ನೆಪತ್ರಿಕೆಗಳನ್ನು ಸಂಬಂಧಿಸಿದ ಕೇಂದ್ರಗಳಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ ಮಾತನಾಡಿ, ಪ್ರಶ್ನೆಪತ್ರಿಕೆಗಳ ಸಾಗಣೆಯಿಂದ ಪರೀಕ್ಷೆ ಪೂರ್ಣಗೊಳ್ಳುವವರೆಗಿನ ಎಲ್ಲ ಹಂತಗಳಲ್ಲಿಯೂ ಪೊಲೀಸ್ ಭದ್ರತೆ ಒದಗಿಸಲಾಗುವುದು. ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪರೀಕ್ಷೆಯ ವೇಳಾಪಟ್ಟಿ

ಮೊದಲ ಪತ್ರಿಕೆಯ ಪರೀಕ್ಷೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಎರಡನೇ ಪತ್ರಿಕೆಯ ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST