LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಪಿಎಸ್‌ಸಿ ಪರೀಕ್ಷಾ ವ್ಯವಸ್ಥೆ: ಆನ್‌ಲೈನ್ ಮೂಲಕ ಪ್ರಶ್ನೆಪತ್ರಿಕೆ ರವಾನೆ

ಬೆಂಗಳೂರು, ಅ. 29: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಗಟ್ಟಲು ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ನಿರ್ಧರಿಸಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಭೌತಿಕವಾಗಿ ಸಾಗಿಸುವ ಬದಲು ಸುರಕ್ಷಿತ ಆನ್‌ಲೈನ್ ವ್ಯವಸ್ಥೆಯ ಮೂಲಕ ರವಾನಿಸುವ ಹೊಸ ಕ್ರಮ ಜಾರಿಗೊಳಿಸಲು ಮುಂದಾಗಿದೆ.

ಗೆಜೆಟೆಡ್ ಪ್ರೊಬೇಷನರಿ 319 ಹುದ್ದೆಗಳ ನೇಮಕಾತಿಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ 1.47 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ನವೆಂಬರ್ 15ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ.

ಆಯೋಗದ ಅಧ್ಯಕ್ಷ ಬಿ. ಪ್ರಭುದೇವ ಹಾಗೂ ಪರೀಕ್ಷಾ ನಿಯಂತ್ರಕ ಎಚ್. ಪ್ರಸನ್ನ ಅವರೊಂದಿಗೆ ಚರ್ಚಿಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ತಿಳಿಸಿದ್ದಾರೆ.

ಈವರೆಗೆ ಮುಖ್ಯ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಒಟ್ಟಿಗೆ ಮುದ್ರಿಸಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಗುತ್ತಿತ್ತು. ಹೊಸ ವ್ಯವಸ್ಥೆಯಲ್ಲಿ ಉತ್ತರ ಪತ್ರಿಕೆಗಳನ್ನು ಮಾತ್ರ ಮುಂಚಿತವಾಗಿ ಮುದ್ರಿಸಿ ರವಾನಿಸಲಾಗುತ್ತದೆ. ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತ ವಿದ್ಯುನ್ಮಾನ ವ್ಯವಸ್ಥೆಯ ಮೂಲಕ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗುತ್ತದೆ.

ಇದರಿಂದ ಪ್ರಶ್ನೆಪತ್ರಿಕೆಗಳ ಮುದ್ರಣ, ಸಂಗ್ರಹಣೆ ಮತ್ತು ಸಾಗಣೆ ಸಂದರ್ಭದಲ್ಲಿ ಸಂಭವಿಸಬಹುದಾದ ಭದ್ರತಾ ಲೋಪಗಳನ್ನು ತಡೆಯಲು ಸಾಧ್ಯವಾಗಲಿದೆ. ಅನಧಿಕೃತ ವ್ಯಕ್ತಿಗಳಿಗೆ ಪ್ರಶ್ನೆಪತ್ರಿಕೆಗಳು ಲಭ್ಯವಾಗದಂತೆ ತಾಂತ್ರಿಕ ಭದ್ರತೆ ಒದಗಿಸುವುದು ಹೊಸ ವ್ಯವಸ್ಥೆಯ ಪ್ರಮುಖ ಉದ್ದೇಶವಾಗಿದೆ.

ಆನ್‌ಲೈನ್ ವ್ಯವಸ್ಥೆಯಲ್ಲಿ ಅಂತರ್ಜಾಲ ಸಂಪರ್ಕ, ವಿದ್ಯುತ್ ಪೂರೈಕೆ ಹಾಗೂ ಸೈಬರ್ ಭದ್ರತೆಯಂತಹ ಸವಾಲುಗಳನ್ನೂ ಸಮರ್ಥವಾಗಿ ನಿರ್ವಹಿಸಬೇಕಾಗಿದೆ. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುವಂತೆ ವ್ಯವಸ್ಥೆ ರೂಪಿಸುವುದು ಆಯೋಗದ ಮುಂದಿರುವ ಪ್ರಮುಖ ಜವಾಬ್ದಾರಿಯಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಅಭ್ಯರ್ಥಿಗಳಲ್ಲಿ ಉಂಟಾಗಿರುವ ಆತಂಕ ನಿವಾರಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸಲು ಆಯೋಗ ಈ ಕ್ರಮಕ್ಕೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಇತರ ನೇಮಕಾತಿಗಳ ಮುಖ್ಯ ಪರೀಕ್ಷೆಗಳಿಗೂ ಇದೇ ವ್ಯವಸ್ಥೆ ವಿಸ್ತರಿಸಲು ಉದ್ದೇಶಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕರ್ನಾಟಕದ ಹಿರಿಯ ಚೇತನ, ಮುತ್ಸದ್ದಿ ಶಿವಾನಂದ ಕೌಜಲಗಿ ಇನ್ನಿಲ್ಲಸ್ಕೂಟರ್‌ನಿಂದ ಬಿದ್ದ ವೃದ್ಧನ ತಲೆ ಮೇಲೆ ಹರಿದ ಬಸ್: ಸ್ಥಳದಲ್ಲೇ ಸಾವುಅತ್ಯಾಚಾರಕ್ಕೆ ಪ್ರತೀಕಾರವಾಗಿ ಇಬ್ಬರ ಅಪಹರಣ: ₹10 ಲಕ್ಷ ಬೇಡಿಕೆ, 10 ಮಂದಿ ಬಂಧನಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಬಹಿರಂಗಬರಪೀಡಿತ ರೈತರಿಗೆ ₹2,500 ಪರಿಹಾರ362 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಸಂಕಷ್ಟ: ರಾಜ್ಯ ಸರ್ಕಾರದ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟನಂದಿನಿ ಹಾಲಿನ ದರ ₹8 ಹೆಚ್ಚಳ : ₹7 ರೈತರಿಗೆ, ₹1 ಕೆಎಂಎಫ್‌ಗೆಕೆಪಿಎಸ್‌ಸಿ ಪರೀಕ್ಷಾ ವ್ಯವಸ್ಥೆ: ಆನ್‌ಲೈನ್ ಮೂಲಕ ಪ್ರಶ್ನೆಪತ್ರಿಕೆ ರವಾನೆಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯ