LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಲಾವಣ್ಯ ಕೊಲೆ: ಚೇತನ್ ಬಂಧನ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಂಗಳೂರು, ಜುಲೈ 17: ಕರಾವಳಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯುವತಿ ಲಾವಣ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚೇತನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಲಾವಣ್ಯ ಹತ್ಯೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಚೇತನ್‌ನ ಪತ್ತೆಗಾಗಿ ವಿಶೇಷ ತಂಡಗಳು ಹಲವು ದಿನಗಳಿಂದ ಶೋಧ ಕಾರ್ಯ ನಡೆಸುತ್ತಿದ್ದವು. ಶುಕ್ರವಾರ ಮುಂಜಾನೆ ಮಂಗಳೂರು ನಗರದ ಹೊರವಲಯದ ವಾಮಂಜೂರು ಸಮೀಪದ ಪಚ್ಚನಾಡಿ ಪ್ರದೇಶದಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಪೊಲೀಸರು ಸುತ್ತುವರೆದಿರುವುದನ್ನು ಅರಿತ ಚೇತನ್, ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲಾವಣ್ಯ ಹತ್ಯೆಯ ಹಿಂದಿನ ನಿಖರ ಕಾರಣ, ಕೃತ್ಯದ ಉದ್ದೇಶ ಹಾಗೂ ಈ ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬ ಕುರಿತು ಆರೋಪಿ ಚೇತರಿಸಿಕೊಂಡ ಬಳಿಕ ಸವಿಸ್ತಾರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇರಾನ್ ಸಂಘರ್ಷದ ನಡುವೆಯೂ ಭಾರತದ ಜಿಡಿಪಿ ಶೇ 7.8ರ ಬೆಳವಣಿಗೆ: ಪ್ರಧಾನಿ ಮೋದಿಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಜೊತೆ ಪ್ರಧಾನಿ ಮೋದಿ ಭೇಟಿ; ವ್ಯಾಪಾರ ವಿಸ್ತರಣೆಗೆ ಒತ್ತು‘ಗೃಹಜ್ಯೋತಿ’ ಸಮೀಕ್ಷೆ ಅವಧಿ ವಿಸ್ತರಣೆಅಪರಾಧ ನಡೆಯುವಾಗ ಕಣ್ಮರೆಯಾಗುತ್ತಾರೆ: ದಿಲ್ಲಿ ಪೊಲೀಸರ ವಿರುದ್ಧ ಅಭಿಜೀತ ದೀಪ್ಕೆ ವಾಗ್ದಾಳಿಪ್ರಕಾಶ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿ : ದೂರು ದಾಖಲುಬಾಲಕರಿಗೆ ಪೈಪ್‌ನಿಂದ ಹಿಗ್ಗಾಮುಗ್ಗಾ ಥಳಿತ; ಸೂಪರ್‌ ಬಜಾರ್‌ ಮಾಲೀಕನ ಬಂಧನದೆಹಲಿ: ನಿರ್ಭಯಾ ಪ್ರಕರಣ ನೆನಪಿಸುವ ಘಟನೆ; ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ : ಮುಸ್ಲಿಂ ಧರ್ಮಗುರುವಿನ ಹೇಳಿಕೆ ವಿವಾದಕ್ಕೆಕೆಪಿಎಸ್‌ಸಿ ನೇಮಕಾತಿ ಹಗರಣ: ₹80 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ, ಬಿಜೆಪಿ ಮುಖಂಡ ಬಸವರಾಜ ಕನ್ನಾಳೆ ಬಂಧನಪೆಟ್ರೋಲ್‌ನಲ್ಲಿನ ಎಥನಾಲ್ ಪ್ರಮಾಣ ಬಹಿರಂಗಪಡಿಸಲು ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಮ ಕೋರ್ಟ