LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
Local News

ಸುಳ್ಳು ಆರೋಪಗಳ ವಿರುದ್ಧ ಕಾನೂನು ಸಮರ: ಸತೀಶ ಜಾರಕಿಹೊಳಿ

ಬೆಳಗಾವಿ, ಅ. ೮ (ಸಮದರ್ಶಿ ಸುದ್ದಿ): ತಮ್ಮ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಾ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಸಚಿವ ಸತೀಶ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಕಮಿಷನ್ ಹಣದಿಂದ ಹೆಲಿಕಾಪ್ಟರ್ ಖರೀದಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಆರೋಪ ಮಾಡುವವರು ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಲಿ. ಆಧಾರರಹಿತ ಆರೋಪಗಳಿಗೆ ಕಾನೂನಿನ ಮೂಲಕವೇ ಉತ್ತರ ನೀಡಲಾಗುವುದು ಎಂದು ಸವಾಲು ಹಾಕಿದರು.

ಜಾರಿ ನಿರ್ದೇಶನಾಲಯದಿಂದ (ಇಡಿ) ನೋಟಿಸ್ ಜಾರಿಯಾಗುವ ಸಾಧ್ಯತೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೆ ತಮಗೆ ಯಾವುದೇ ನೋಟಿಸ್ ಬಂದಿಲ್ಲ . ಒಂದು ವೇಳೆ ಇಡಿಯಿಂದ ನೋಟಿಸ್ ಬಂದರೆ ಅದಕ್ಕೆ ಕಾನೂನುಬದ್ಧವಾಗಿ ಉತ್ತರ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯೋತ್ಸವಕ್ಕೆ ಮೇಯರ್, ಉಪಮೇಯರ್ ಆಹ್ವಾನಿಸದಂತೆ ಆಗ್ರಹಮತದಾರರು ಸತ್ತಿದ್ದಾರೆಂದು ಶಾಸಕರ ಲೆಟರ್‌ಹೆಡ್‌ನಲ್ಲಿ ಅರ್ಜಿ: ಯತ್ನಾಳ ಸೇರಿ ಮೂವರ ವಿರುದ್ಧ ಎಫ್‌ಐಆರ್ಸೆನ್ಸೆಕ್ಸ್ 1,045 ಅಂಕ, ನಿಫ್ಟಿ 371 ಅಂಕ ಕುಸಿತ; ಒಂದೇ ದಿನ ₹10 ಲಕ್ಷ ಕೋಟಿ ನಷ್ಟ!ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ: ಅಭಿಜೀತ ದೀಪ್ಕೆಮತಗಳ ಕಳ್ಳತನಕ್ಕೆ ಮೂರು ಸಾಕ್ಷ್ಯಗಳಿವೆ, ಮೋದಿ, ಶಾ ಉತ್ತರಿಸಲಿ: ಧ್ರುವ ರಾಠಿಗ್ಯಾನೇಶ ಕುಮಾರ ಹೋದರೆ ಮತ್ತೊಬ್ಬ ಅಜ್ಞಾನೇಶ ಬರುತ್ತಾನೆ, ಎಸ್‌ಐಆರ್‌ ರದ್ದಾಗಲಿ: ಪ್ರಕಾಶ ರಾಜ್ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವಜೇನುನೊಣಗಳ ದಾಳಿಗೆ ಬೆಳಗುಂದಿ ರೈತ ಬಲಿಧಾರವಾಡ ಕರಿಯಮ್ಮ ದೇವಸ್ಥಾನದಲ್ಲಿ ಅ. ೧೧ರಿಂದ ನವರಾತ್ರಿ ಉತ್ಸವಸುಳ್ಳು ಆರೋಪಗಳ ವಿರುದ್ಧ ಕಾನೂನು ಸಮರ: ಸತೀಶ ಜಾರಕಿಹೊಳಿ