LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಯಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿ ಸ್ಥಾಪಿಸುವ ನಿರ್ಣಯ ಅಧಿವೇಶನದಲ್ಲಿ ಪಾಸಾಗಲಿ –ಅಶೋಕ ಪೂಜಾರಿ

ಗೋಕಾಕ, ೩೦: ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಮಟ್ಟದ ಕಚೇರಿ (ಸೆಕ್ರೆಟರಿಯಟ್) ಪ್ರಾರಂಭಿಸುವ ಮೂಲಕ ಉತ್ತರ ಕರ್ನಾಟಕ ಭಾಗದ ಜನತೆಗೆ ನೈಜ ಅಧಿಕಾರ ವಿಕೇಂದ್ರಿಕರಣದ ಪ್ರಯೋಜನ ದೊರೆಯಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ನಿಂಗಯ್ಯಾಸ್ವಾಮಿ ಪೂಜಾರಿ ಆಗ್ರಹಿಸಿದ್ದಾರೆ.



ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ದಶಕದ ಹಿಂದೆ ಬೆಳಗಾವಿಯಲ್ಲಿ ನಿರ್ಮಿಸಲಾಗಿತ್ತು. ಇದರಿಂದ ಆಡಳಿತ ವಿಕೇಂದ್ರೀಕರಣವಾಗಿ ಕಾರ್ಯದರ್ಶಿ ಮಟ್ಟದ ಕಚೇರಿಗಳು ಸುವರ್ಣಸೌಧದಲ್ಲಿ ಸ್ಥಾಪಿತಗೊಂಡು ಇಡೀ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಈ ಭಾಗದ ಜನರ ಕನಸಾಗಿತ್ತು. ಆದರೆ ದುರ್ದೈವದಿಂದ ಅದು ಕನಸಾಗಿಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ.



ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ಬೇಕು ಬೇಡಿಕೆಗಳಿಗೆ ಪೂರಕವಾದ ಸರಕಾರದ ಅಂತಿಮ ಆದೇಶಗಳು ಇಲ್ಲಿಂದಲೇ ದೊರೆಯಬೇಕು. ಆ ರೀತಿಯ ಪೂರಕ ಚರ್ಚೆ ಮತ್ತು ಹಕ್ಕೊತ್ತಾಯ ಡಿಸೆಂಬರ ೪ರಿಂದ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಚಿವರು ಮತ್ತು ಜನಪ್ರತಿನಿಧಿಗಳಿಂದ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.



ಈ ಅಧಿವೇಶನದಲ್ಲೇ‌ ಬೆಳಗಾವಿಯಲ್ಲಿ ಸೆಕ್ರೆಟೇರಿಯಟ್ ಕಚೇರಿ ಸ್ಥಾಪನೆಯ ಕುರಿತ ನಿರ್ಣಯ ಅಂಗೀಕರಿಸಬೇಕು ಮತ್ತು ಇದಕ್ಕೆ ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಪ್ರಯತ್ನಿಸಬೇಕೆಂದು ಅಶೋಕ ಪೂಜಾರಿ ಆಗ್ರಹಿಸಿದ್ದಾರೆ. ಒಂದು ವೇಳೆ ಈ ವಿಷಯದಲ್ಲಿ ಯಾವುದೇ ನಿರ್ಣಯ ಆಗದಿದ್ದರೆ ಉತ್ತರ ಕರ್ನಾಟಕ ಭಾಗದ ಜನರಿಂದ ದೊಡ್ಡ ಮಟ್ಟದ ಹೋರಾಟ ಅನಿವಾರ್ಯವಾಗಲಿದೆ ಎಂದು ಪೂಜಾರಿ ಎಚ್ಚರಿಸಿದ್ದಾರೆ.



[video width="848" height="480" mp4="https://samadarshi.net/wp-content/uploads/2023/11/VID-20231130-WA0003.mp4"][/video]
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು