LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣ, 18 ಖಾಲಿ ನಿವೇಶನ ಪತ್ತೆ 

ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಮನೆ ಮೇಲೆ ಗುರುವಾರದಿಂದ ನಡೆದಿದ್ದ ಲೋಕಾಯುಕ್ತ ಅಧಿಕಾರಿಗಳ ದಾಳಿ ಶನಿವಾರ  ಅಂತ್ಯಗೊಂಡಿದೆ.


ದಾಳಿ ವೇಳೆ ಅಜಯ್ ಸಿಂಗ್ ರಜಪೂತ್ ನಿವಾಸ ಹಾಗೂ ಕಚೇರಿಗಳಲ್ಲಿ  ಒಟ್ಟು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಇದು ಅವರ ಸಂಪಾದನೆಗಿಂತ ಎಷ್ಟೋ ಪಟ್ಟು ಹೆಚ್ಚಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.


ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಅಲ್ಲದೇ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಿಂದ ಸಾಬೀತಾಗಿದೆ. ಜೊತೆಗೆ ರಜಪೂತ ಐಷಾರಾಮಿ ಕಾರು ಮತ್ತು ಬೈಕ್‌ಗಳನ್ನು ಹೊಂದಿದ್ದರು ಎಂದೂ ದಾಳಿ ಮಾಡಿದ್ದ ಅಧಿಕಾರಿಗಳು ತಿಳಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST