LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾ

ಕೋಲ್ಕತ್ತ, 15: ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ರಾಜಕೀಯ ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮದನ್ ಮಿತ್ರಾ ಅವರು ಬುಧವಾರ ಮಮತಾ ಬ್ಯಾನರ್ಜಿ ಬಣ ತೊರೆದು ರಿತಬ್ರತ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವನ್ನು ಸೇರಿದ್ದಾರೆ.

ಬಂಡಾಯ ಬಣ ಸೇರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮದನ್ ಮಿತ್ರಾ, "ನಾನು ನನ್ನ ಕೋಣೆಯನ್ನು ಮಾತ್ರ ಬದಲಾಯಿಸಿದ್ದೇನೆ, ಮನೆಯನ್ನಲ್ಲ. ನಾನು ಈಗಲೂ ತೃಣಮೂಲ ಕಾಂಗ್ರೆಸ್‌ನಲ್ಲೇ ಇದ್ದೇನೆ" ಎಂದು ಪ್ರತಿಕ್ರಿಯಿಸಿದರು.

ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಭಾರೀ ಸೋಲು ಅನುಭವಿಸಿತ್ತು. ಬಿಜೆಪಿ 208 ಕ್ಷೇತ್ರಗಳಲ್ಲಿ ಜಯಗಳಿಸಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದ್ದರೆ, ತೃಣಮೂಲ ಕಾಂಗ್ರೆಸ್ 80 ಕ್ಷೇತ್ರಗಳಿಗೆ ಸೀಮಿತವಾಗಿತ್ತು. ಆದರೆ ಮದನ್ ಮಿತ್ರಾ ತಮ್ಮ ಕಮರ್ಹಟಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಚುನಾವಣೆ ಬಳಿಕ ತೃಣಮೂಲ ಕಾಂಗ್ರೆಸ್‌ನಲ್ಲಿ ಭಿನ್ನಮತ ತೀವ್ರಗೊಂಡಿದ್ದು, ಹಲವು ಶಾಸಕರು ಹಾಗೂ ನಾಯಕರು ಮಮತಾ ಬ್ಯಾನರ್ಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದುವರೆಗೆ 55ಕ್ಕೂ ಹೆಚ್ಚು ಶಾಸಕರು ರಿತಬ್ರತ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಇದರ ನಡುವೆಯೇ ಪೌರಾಡಳಿತ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಮದನ್ ಮಿತ್ರಾ ಅವರ ಪತ್ನಿ ಹಾಗೂ ಇಬ್ಬರು ಪುತ್ರರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಮದನ ಮಿತ್ರಾ ಅವರನ್ನು 2014ರಲ್ಲಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರು, 2021ರಲ್ಲಿ ನಾರದ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದಲ್ಲೂ ಬಂಧನಕ್ಕೊಳಗಾಗಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ