LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತನೀರಾವರಿ ಯೋಜನೆ ಪೂರ್ಣ : ಸಿಎಂ ಬೊಮ್ಮಾಯಿ 

ಬೆಂಗಳೂರು : ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಚಿಕ್ಕೋಡಿ ರೈತರಿಗೆ ಭರವಸೆ ನೀಡಿದರು.



ಮಾಜಿ ಸಂಸದ ಪ್ರಭಾಕರ ಕೋರೆ ಅವರ ನೇತೃತ್ವದ ತಂಡ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ರೈತ ಮುಖಂಡರು ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶ್ರೀ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.



ಚಿಕ್ಕೋಡಿಯ ಮಹಾಲಕ್ಷ್ಮಿ ಏತನೀರಾವರಿ ಯೋಜನೆಗೆ ಸುಮಾರು 10-12 ವರ್ಷಗಳಿಂದ ಬೇಡಿಕೆ ಇತ್ತು. ಕಬ್ಬು ಬೆಳೆದು, ಸಕ್ಕರೆ ಕಾರ್ಖಾನೆಗಳಿರುವ ಚಿಕ್ಕೋಡಿಯ ಕೆಲವು ಗ್ರಾಮಗಳಿಗೆ ಏತ ನೀರಾವರಿ ಅಗತ್ಯವಿತ್ತು. ಈ ಭಾಗದ ರೈತರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ ಎಂದರು.



ಶಾಸಕ ಅರವಿಂದ ಬೆಲ್ಲದ , ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ