LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್

ಬೆಳಗಾವಿ, ಜುಲೈ 21: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜುಲೈ 9ರ ಬೆಳಗಾವಿ ಪ್ರವಾಸದ ವೇಳೆ ವೈದ್ಯಕೀಯ ಭದ್ರತಾ ಪ್ರೋಟೋಕಾಲ್ ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಸರ್ಕಾರದ ನಿಯಮಾವಳಿಯಂತೆ ಮುಖ್ಯಮಂತ್ರಿ ಪ್ರವಾಸದ ಸಂದರ್ಭ ಅತ್ಯಾಧುನಿಕ ಜೀವ ರಕ್ಷಕ ಉಪಕರಣಗಳನ್ನು ಹೊಂದಿರುವ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರ ತಂಡ ಕಡ್ಡಾಯವಾಗಿ ನಿಯೋಜಿಸಬೇಕಾಗಿತ್ತು. ಆದರೆ ಸಾಮಾನ್ಯ ಅಂಬುಲೆನ್ಸ್ ಮಾತ್ರ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.

ಮುಖ್ಯಮಂತ್ರಿ ತಂಗಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರ ಬದಲು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜಿಸಿರುವುದು ಹಾಗೂ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಮತ್ತು ಜಿಲ್ಲಾಡಳಿತದ ಸಮನ್ವಯ ಕಾಪಾಡದಿರುವುದು ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಏಳು ದಿನಗಳೊಳಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅಮಾನತು ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿದೆಹಲಿ ಪೊಲೀಸರ ಲಾಠಿ ಪ್ರಹಾರದಲ್ಲಿ ಗಾಯಗೊಂಡ ಯುವತಿ ವೆಂಟಿಲೇಟರ್‌ನಲ್ಲಿ; ಸ್ಥಿತಿ ಗಂಭೀರ