LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಸಕ ರಮೇಶ ಜಾರಕಿಹೊಳಿ ಆಪ್ತನಿಗೆ ಚೂರಿ ಇರಿತ; ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಹೋದರ ಹಟ್ಟಿಹೊಳಿ ಮೇಲೆ ಆರೋಪ

ಬೆಳಗಾವಿ, ೪:  ಬೆಳಗಾವಿ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯಕರ್ತ ಹಾಗು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ.



ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪೃಥ್ವಿ ಸಿಂಗ್ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, “ತಮ್ಮ ಮೇಲಾದ ಹಲ್ಲೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಣ” ಎಂದು ಆರೋಪಿಸಿದ್ದಾರೆ. 55 ವರ್ಷದ ಪೃಥ್ವಿಸಿಂಗ್ ಅವರ ಎಡಗೈ  ಮತ್ತು ಕುತ್ತಿಗಿಗೆ ಗಾಯಗಳಾಗಿವೆ.



ಆದರೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪ ನಿರಾಕರಿಸಿ, ಪೊಲೀಸರು ತನಿಖೆ ಮಾಡಲಿ ಎಂದು ತಿಳಿಸಿದ್ದಾರೆ. ಪೃಥ್ವಿಸಿಂಗ್ ಅವರ ಬಳಿಯಿಂದ ಒಂದು ದಾಖಲೆ ಪತ್ರ ಪಡೆಯಲು ತಮ್ಮ ಕಡೆಯ ಒಂದಿಬ್ಬರು ಹಿಂಡಲಗಾ ಸಮೀಪದ ಜಯನಗರದಲ್ಲಿ ಅವರ ನಿವಾಸಕ್ಕೆ ತೆರಳಿದ್ದರು. ಆಗ ಅವರು ಕೇಸರಿ ಬಣ್ಣದ ಟಿ ಶರ್ಟ ಧರಿಸಿದ್ದರು. ಆದರೆ ಈಗ ಚಾಕುವಿನಿಂದ ಇರಿಯಲಾಗಿದೆ ಎಂದು ವಿಡಿಯೋ ರೆಕಾರ್ಡಿಂಗ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಅವರು ಧರಿಸಿಕೊಂಡಿದ್ದು ಬಿಳಿ ಬಣ್ಣದ ಶರ್ಟ. ಇದೆಲ್ಲ ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ ಎಂದು ಸಚಿವೆ ಲಕ್ಷ್ಮಿ ತಿಳಿಸಿದ್ದಾರೆ.



ಕೆಎಲ್‌ ಇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿರುವ ಪೃಥ್ವಿಸಿಂಗ್ ಅವರನ್ನು ಬಿಜೆಪಿ ಅಧ್ಯಕ್ಷ, ಶಾಸಕ ವಿಜಯೇಂದ್ರ ಸೇರಿದಂತೆ ಬಿಜೆಪಿ ಶಾಸಕರು ಹೋಗಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು