LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಚಿವ ಉಮೇಶ ಕತ್ತಿ ನಿಧನ

ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಸಚಿವ ಉಮೇಶ ಕತ್ತಿ ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.



ಬೆಂಗಳೂರಿನ ಡಾಲರ್ಸ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾಥ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.



ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ ಬೆಳಗಾವಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ‌ 14ರಂದು ಜನಿಸಿದ್ದ ಉಮೇಶ್‌ ಕತ್ತಿ ಅವರು ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಅವರನ್ನು ಅಗಲಿದ್ದಾರೆ.



ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಒಲವು ಹೊಂದಿದ್ದ ಉಮೇಶ ಕತ್ತಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಪಾರ ರಾಜಕೀಯ ಅನುಭವ ಹೊಂದಿದ್ದ ಉಮೇಶ ಕತ್ತಿ ಅವರು ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ತಾವು ಒಂದಲ್ಲ ಒಂದು ದಿನ ನಾನು ಮುಖ್ಯಮಂತ್ರಿಯಾಗುವುದಾಗಿ ಸತತವಾಗಿ ಹೇಳುತ್ತಿದ್ದರು.



ತಮ್ಮ ಸಂಪುಟ ಸಹೋದ್ಯೋಗಿ ಉಮೇಶ ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ



ತಂದೆ ವಿಶ್ವನಾಥ ಕತ್ತಿಯವರಂತೆ ಉಮೇಶ ಕತ್ತಿ ಅವರು ಅಕಾಲಿಕ ಮರಣ ಹೊಂದಿದ್ದಾರೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ