LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಸಚಿವ ಸ್ಥಾನ ಹೈಕಮಾಂಡ್‌ ವಿವೇಚನೆಗೆ ಬಿಟ್ಟ ವಿಚಾರ : ಸತೀಶ

ಬೆಳಗಾವಿ, ಜುಲೈ 21: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಿಂದ ಮೂವರು ನಾಯಕರ ಹೆಸರುಗಳು ಸಚಿವ ಸ್ಥಾನಕ್ಕೆ ಚರ್ಚೆಯಲ್ಲಿವೆ. ಅವರಲ್ಲಿ ಯಾರಿಗೆ ಅವಕಾಶ ದೊರಕಿದರೂ ಅವರು ಜಿಲ್ಲೆಯವರೇ ಆಗಿರುವುದರಿಂದ ಸಂತೋಷವೇ ಎಂದು ಹೇಳಿದರು.

ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್‌ನ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಬೆಳಗಾವಿ ಭಾಗದ ಮುಸ್ಲಿಂ ನಾಯಕರಿಗೆ ಸಚಿವ ಸ್ಥಾನ ದೊರೆಯುತ್ತದೆಯೇ ಎಂಬುದು ಕೂಡ ಹೈಕಮಾಂಡ್‌ನ ಅಂತಿಮ ತೀರ್ಮಾನದ ಮೇಲೆ ಅವಲಂಬಿತವಾಗಿದೆ. ಸಚಿವರನ್ನು ಆಯ್ಕೆ ಮಾಡುವಾಗ ಅನುಭವ, ಪ್ರಾದೇಶಿಕ ಸಮತೋಲನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಹಗರಣವನ್ನು ವಿರೋಧಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ತಕ್ಷಣವೇ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಈ ಹೋರಾಟದಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರತಿಭಟನೆಯಲ್ಲಿ ಭಾಗವಹಿಸಿರುವವರು ವಿದ್ಯಾರ್ಥಿಗಳೇ ಹೊರತು ರಾಜಕೀಯ ನಾಯಕರು ಅಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮೀಕ್ಷೆ ವರದಿ ಬಂದ ಬಳಿಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬರ ಘೋಷಣೆಗೆ ಕೇಂದ್ರದ ಅನುಮೋದನೆ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ