LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೊಮ್ಮಾಯಿ ಸರ್ಕಾರ ಚುನಾವಣೆಗೆ ಮೊದಲು ಹೆಚ್ಚಿಸಿ ಹೋದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಲು ಶಾಸಕ ಸೇಠ ಪತ್ರ

ಬೆಂಗಳೂರು, ೧೩- ಹಿಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಗೆ ಮೊದಲು ಹೆಚ್ಚಿಸಿ ಹೋಗಿದ್ದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕೆಂದು ಎಂದು ಮೈಸೂರು ಶಾಸಕ ತನ್ವೀರ ಸೇಠ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೇಳಿಕೊಂಡಿದ್ದಾರೆ.



ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ತಿಳಿದಿದ್ದು ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.



ವಿಧಾನಸಭೆ ಚುನಾವಣೆ ಮೊದಲು ಕಾಂಗ್ರೆಸ್ ಪಕ್ಷದಿಂದ ಕೆಲವು ಜನಪರ ಘೋಷಣೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಜನಪರ ಘೋಷಣೆಗೆ ಮಾರಕವಾಗಿ ಸ್ಪಂದಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದೊಂದಿಗೆ ಗೆಲ್ಲಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ದಿನವೇ ಅನುಷ್ಠಾನಗೊಳಿಸಲು ಸೂಕ್ತ ಆದೇಶವನ್ನು ಹೊರಡಿಸಲಾಗಿದೆ. ಗ್ಯಾರೆಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದು. ಆದರೆ ಈ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯಾತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ವಿದ್ಯುತ್‌ ನಿಗಮಗಳಲ್ಲಿ ಏಪ್ರಿಲ್ 2023 ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್‌ ದರವನ್ನು ಹೆಚ್ಚಿಸಿತ್ತು. ಇದು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಹೆಚ್ಚಾಗಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅವರು ಬರೆದಿದ್ದಾರೆ.



ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯುನಿಟ್‌ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ಬೆಲೆ ಏರಿಸಲು ನಿಗಮಗಳು 30.11.2022 ರಲ್ಲಿ ಮಂಡಳಿಗಳಿಗೆ ಪ್ರಸ್ತಾವನೆಯನ್ನು ನಿಲ್ಲಿಸಿದ್ದು, ಬೆಲೆ ಏರಿಸಿ  ಏಪ್ರಿಲ್‌ 2003 ರಿಂದ ಪೂರ್ವಾನ್ವಯವಾಗುವಂತೆ ಆದೇಶ ನೀಡಲಾಗಿದೆ. ಆದರೆ ಜನ ಸಾಮಾನ್ಯರು ಬೆಲೆಯನ್ನು ಪ್ರಸ್ತುತ ಸರ್ಕಾರ ಹೆಚ್ಚಿಸಿರುವುದಾಗಿ ತಿಳಿದುಕೊಂಡಿದ್ದಾರೆ. ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಲು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತನ್ವೀರ ಸೇಠ ಅವರು ಪತ್ರದಲ್ಲಿ ಕೇಳಿಕೊಂಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST