LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೊಬೈಲ್ ನಿಷೇಧ

ಮುಂಬೈ : ಮಹಾರಾಷ್ಟ್ರದ ಯವತಮಾಲ್ ಜಿಲ್ಲೆಯ ಪುಸಾದ್ ತಾಲೂಕಿನ ಹಳ್ಳಿಯೊಂದರಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲಾಗಿದೆ.



ಪುಸಾದ್ ತಾಲೂಕಿನ ಬನ್ಸಿ ಗ್ರಾಮಸ್ಥರು ಸೇರಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಕೋವಿಡ್​ 19 ಸಾಂಕ್ರಾಮಿಕದ ಸಮಯದಲ್ಲಿ ಆನ್ಲೈನ್ ಶಿಕ್ಷಣಕ್ಕಾಗಿ ಮಕ್ಕಳು ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದ್ದರು.



ಈಗ ಮೊಬೈಲ್​ ನೋಡುವುದು ಅತಿಯಾಗಿದೆ. ವಿವಿಧ ವೆಬಸೈಟ್ ವೀಕ್ಷಿಸುವುದು ಮತ್ತು ಆನಲೈನ್ ಆಟಗಳನ್ನು ಆಡುತ್ತಾ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗೆಯೇ ಮುಂದುವರೆದರೆ ಶೀಘ್ರದಲ್ಲೇ ಮೊಬೈಲ್​ ವ್ಯಸನಿಗಳಾಗುತ್ತಾರೆ. ಹೀಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗ್ರಾಮದ ಸರಪಂಚ್​ ಗಜಾನನ ಟೆಲಿ ತಿಳಿಸಿದ್ದಾರೆ.



ಮೊಬೈಲ್​ ಅತಿಯಾದ ಬಳಕೆಯನ್ನು ತಪ್ಪಿಸಲು ಈ ಕ್ರಮ ಸೂಕ್ತ. ಆರಂಭದಲ್ಲಿ ಸಮಸ್ಯೆ ಉಂಟಾಗಬಹುದು. ಈ ಕುರಿತು ಪೋಷಕರು ಮತ್ತು ಮಕ್ಕಳಿಬ್ಬರಿಗೂ ಸಲಹೆ ನೀಡಲಾಗುವುದು. ಕೌನ್ಸೆಲಿಂಗ್ ಮಾಡಿದ ನಂತರವೂ ಮಕ್ಕಳು ಮೊಬೈಲ್ ಬಳಸುವುದು ಕಂಡು ಬಂದರೆ ನಾವು ದಂಡ ವಿಧಿಸುತ್ತೇವೆ. ಮಕ್ಕಳು ಮತ್ತೆ ಅಧ್ಯಯನಕ್ಕೆ ಹೋಗುವಂತೆ ಮಾಡುವುದು ಹಾಗೂ ಮೊಬೈಲ್ ಫೋನ್ಗಳಿಗೆ ಅಂಟಿಕೊಂಡು ವಿಚಲಿತರಾಗದಂತೆ ಮಾಡುವುದು ಇದರ ಉದ್ದೇಶ ಎಂದು ಹೇಳಿದರು.



ಈ ವರ್ಷದ ಸ್ವಾತಂತ್ರ್ಯ ದಿನದಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೋಹಿತ್ಯಂಚೆ ವಡಗಾಂವ ಗ್ರಾಮದಲ್ಲಿಯೂ ಸಹ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ