LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರದ 300 ಕ್ಕೂ ಹೆಚ್ಚು ಬಸ್ ಸೇವೆ ಸ್ಥಗಿತ 

ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.



ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ. ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ.



ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದ್ದು ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ