LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿ ರೈಲು ನಿಲ್ದಾಣಕ್ಕೆ ನಾಗನೂರು ರುದ್ರಾಕ್ಷಿಮಠದ ಡಾ. ಶಿವಬಸವ ಸ್ವಾಮೀಜಿ ಹೆಸರು ನಾಮಕರಣ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಜಗದೀಶ ಶೆಟ್ಟರ್

ಬೆಳಗಾವಿ: ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯ ನೂತನ ಸಂಸದ ಭವನದ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಬೆಳಗಾವಿ ರೈಲು ನಿಲ್ದಾಣವನ್ನು ನಾಗನೂರು ರುದ್ರಾಕ್ಷಿಮಠದ ಡಾ. ಶಿವಬಸವ ಸ್ವಾಮೀಜಿಯವರ ಹೆಸರಿನಲ್ಲಿ ಬೆಳಗಾವಿ ರೈಲು ನಿಲ್ದಾಣವೆಂದು ನಾಮಕರಣ ಮಾಡುವ ಬಗ್ಗೆ ವಿಷಯ ಪ್ರಸ್ತಾಪಿಸಿದರು.



ಪ್ರಸ್ತಾಪಿತ ರೈಲು ನಿಲ್ದಾಣವನ್ನು ಡಾ. ಶಿವಬಸವ ಸ್ವಾಮೀಜಿ ಬೆಳಗಾವಿ ರೈಲು ನಿಲ್ದಾಣವೆಂದು ನಾಮಕರಣ ಮಾಡುವದು ಇಲ್ಲಿನ ನಿವಾಸಿಗಳ ಅನೇಕ ದಿನಗಳ ಬೇಡಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಸಂಬಂಧಿತ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ದೆಹಲಿ ಗೃಹ ಸಚಿವಾಲಯಕ್ಕೆ ತಲುಪಿದೆ.



ಈ ಬಗ್ಗೆ ರೇಲ್ವೆ ಸಚಿವಾಲಯದಿಂದಲೂ ಸಹ ಅಭಿಮತ ವ್ಯಕ್ತಪಡಿಸಿ, ಪ್ರಸ್ತಾವನೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿದ್ದಲ್ಲಿ ಶೀಘ್ರ ರೈಲು ನಿಲ್ದಾಣ ನಾಮಕರಣವಾಗಿದ್ದಲ್ಲಿ ಅನುಕೂಲವಾಗುವುದೆಂದು ಸಂಸದರ ಪ್ರಸ್ತಾಪಕ್ಕೆ ಕೇಂದ್ರ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.



ಅದರಂತೆ ಬೆಳಗಾವಿ - ಬೆಂಗಳೂರು ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ರೈಲು ಬೆಳಗಾವಿಯಿಂದ ನಿರ್ಗಮನದ ಸಮಯವನ್ನು ಬೆಳ್ಳಿಗ್ಗೆ : 5.20 ಬದಲಾಗಿ 6.15 ಕ್ಕೆ ಪರಿವರ್ತಿಸುವ ಕುರಿತು ಪ್ರಯಾಣಿಕರ ಬೇಡಿಕೆ ಇರುವ ವಿಷಯ ತಿಳಿಸಿದಾಗ ಕೇಂದ್ರ ರೇಲ್ವೆ ಸಚಿವರು ಬೆಳಗಾವಿ ನಿವಾಸಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿಯೇ ವಿಷಯ ಪರಿಗಣನೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ಇನ್ನು ಬೆಂಗಳೂರು - ಬೆಳಗಾವಿ - ಮುಂಬೈ ನಡುವೆ ಶೀಘ್ರ ಸೂಪರ್ ಪಾಸ್ಟ್ ರೈಲು ಸಂಚಾರ ಸಹ ಪ್ರಾರಂಭಿಸುವಂತೆ ಸಂಸದರು ವಿನಂತಿಸಿದರು.



ಲೋಕಾಪುರ - ರಾಮದುರ್ಗ - ಸವದತ್ತಿ - ಧಾರವಾಡ ನಡುವೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಪೂರಕವಾಗಿ ನಡೆಸುವ ಸಮೀಕ್ಷೆಯ ಕುರಿತು ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವ ಬಗ್ಗೆಯೂ ಚರ್ಚಿಸಿದರು. ಈ ಕುರಿತು ಸಹ ಅನುಮೋದನೆ ನೀಡುವ ಭರವಸೆಯನ್ನು ಅಶ್ವಿನಿ ವೈಷ್ಣವ್ ಅವರು ಚರ್ಚೆಯ ಸಮಯದಲ್ಲಿ ತಿಳಿಸಿದರು. ಇದೇ ವಿಷಯವಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರೊಂದಿಗೂ ಸಂಸದ ಜಗದೀಶ ಶೆಟ್ಟರ್ ಚರ್ಚೆ ನಡೆಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು