LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಾಳೆಯೂ ಮುಧೋಳ ಬಂದ್ ಮುಂದುವರಿಕೆ 

ಬಾಗಲಕೋಟ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರೈತ ಸಂಘಟನೆಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇದೀಗ ಚಳವಳಿ ತೀವ್ರಗೊಂಡಿದೆ. ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಇಂದು ಬಂದ್ ಮಾಡಲಾಗಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು.



ನಾಳೆ ಗುರುವಾರವೂ ಕೂಡ ಮುಧೋಳ ಪಟ್ಟಣದಲ್ಲಿ ಬಂದ್ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ.



ಸಚಿವರು ಭರವಸೆ ಈಡೇರಿಸದ ಹಿನ್ನೆಲೆ ನಾಳೆ ಮತ್ತೆ ಪ್ರತಿಭಟನೆ ಮುಂದುವರೆಸಲಿದ್ದೇವೆ, ಬಂದ್ ಮಾಡಲಿದ್ದೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಾಳೆಯೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ, ಅಂಗಡಿ ಮುಂಗಟ್ಟುಗಳು ಬಂದ್ ಆಗಲಿವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.



ಈ ಹಿನ್ನೆಲೆ ಬಾಗಲಕೋಟ ಜಿಲ್ಲಾದ್ಯಂತ ಇಂದಿನಿಂದ ನವೆಂಬರ್ 19 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.



ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ