LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ರಾಷ್ಟ್ರಗೀತೆ ಮೊಳಗಿಸಿ ಪ್ರತಿಭಟನೆ: ಹೊಸ ಶೈಲಿ ವೈರಲ್

ಹೊಸದಿಲ್ಲಿ, ಜುಲೈ 23: ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಪೊಲೀಸ್ ಬಲಪ್ರಯೋಗ, ಬಂಧನಗಳು ಹಾಗೂ ಸರ್ಕಾರದ ಮನವಿಗಳ ನಡುವೆಯೂ ಯುವ ಸಮೂಹ ಧರಣಿಯನ್ನು ಮುಂದುವರಿಸಿದ್ದು, ಪ್ರತಿಭಟನೆಯ ವಿಭಿನ್ನ ಶೈಲಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.

ಪ್ರತಿಭಟನೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದರೂ ಹಾಗೂ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರೂ ಪ್ರತಿಭಟನಾಕಾರರು ಹಿಂತಿರುಗದೆ ವಿವಿಧ ರೀತಿಯ ಸಾಂಕೇತಿಕ ಪ್ರತಿಭಟನೆಗಳನ್ನು ನಡೆಸಿದರು. ವಿಶೇಷವಾಗಿ ಜೆನ್ ಝೀ ಪೀಳಿಗೆಯ ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ವೈರಲ್ ಆಗಿರುವ ವಿಡಿಯೊವೊಂದರಲ್ಲಿ ಲಖನೌ ಮೂಲದ ಯುವಕ ಜಿರಳೆ (ಕಾಕ್ರೋಚ್‌) ವೇಷ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆತ, ತಾನು ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಕಾಕ್ರೋಚ್‌ ಜನತಾ ಪಕ್ಷದ ಬೆಂಬಲಕ್ಕಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾಗಿ ಹೇಳಿದ್ದಾನೆ.

ಮತ್ತೊಂದು ವಿಡಿಯೊದಲ್ಲಿ ಯುವಕನೊಬ್ಬ ರಸ್ತೆ ಮಧ್ಯೆಯೇ ಸೊಳ್ಳೆ ಪರದೆ ಹಾಕಿಕೊಂಡು ಅದರೊಳಗೆ ಕುಳಿತು ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿರುವ ದೃಶ್ಯ ಕಂಡುಬಂದಿದೆ. ಕೆಲ ವಿದ್ಯಾರ್ಥಿಗಳು ರಸ್ತೆ ಮಧ್ಯೆಯೇ ರೀಲ್ಸ್‌ ವಿಡಿಯೊಗಳನ್ನು ಚಿತ್ರೀಕರಿಸಿರುವ ದೃಶ್ಯಗಳೂ ಹರಿದಾಡುತ್ತಿವೆ.

ಇನ್ನೊಂದು ವೈರಲ್ ವಿಡಿಯೊದಲ್ಲಿ ಪೊಲೀಸರು ಪ್ರತಿಭಟನಾಕಾರರತ್ತ ಮುನ್ನಡೆಯುತ್ತಿದ್ದಂತೆ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಹಾಡಲು ಆರಂಭಿಸಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಕೆಲವರು ವ್ಯಂಗ್ಯಾತ್ಮಕವಾಗಿ ಕಾಮೆಂಟ್‌ಗಳನ್ನೂ ಮಾಡಿದ್ದಾರೆ.

ಇದರ ಜೊತೆಗೆ, ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳ ಮೇಲೆ ಹತ್ತಿ ಆಟವಾಡುವುದು, ಬ್ಯಾರಿಕೇಡ್‌ಗಳನ್ನು ನೆಟ್‌ನಂತೆ ಬಳಸಿಕೊಂಡು ಶೆಟಲ್‌ಕಾಕ್ ಆಡುವುದು ಸೇರಿದಂತೆ ವಿವಿಧ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ