LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನೀಟ್ ಪರೀಕ್ಷೆ ವೈಫಲ್ಯ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಬೇಡ

ಬೆಂಗಳೂರು, ಮೇ 12 : ನೀಟ್ ಯುಜಿ 2026 ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿರುವುದು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪದೇ ಪದೇ ಉಂಟಾಗುತ್ತಿರುವ ವೈಫಲ್ಯಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವರ್ಷಗಳ ಕಾಲ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಿಢೀರ್ ಮರುಪರೀಕ್ಷೆ ಘೋಷಣೆ ಗದಾಪ್ರಹಾರದಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರದ ಬೇಜವಾಬ್ದಾರಿಯುತ ನಿರ್ಧಾರಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಹತಾಶೆಗೆ ದೂಡುತ್ತಿವೆ ಎಂದು ಹೇಳಿದರು.

ದೇಶದ ಜನರಿಗೆ ಇಂಧನ ಉಳಿಸುವ ಕುರಿತು ಬುದ್ಧಿಮಾತು ಹೇಳುವ ಕೇಂದ್ರ ಸರ್ಕಾರಕ್ಕೆ ತನ್ನ ಮೂಲ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೇ ಎಂದು ಪ್ರಶ್ನಿಸಿದ ಸಚಿವರು, ಜನರಿಗೆ ಜೀವನಶೈಲಿ ಪಾಠ ಮಾಡುವ ಮುನ್ನ ಕನಿಷ್ಠ ಒಂದು ನೀಟ್ ಪರೀಕ್ಷೆಯನ್ನಾದರೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಡೆಸುವ ಜವಾಬ್ದಾರಿ ತೋರಬೇಕು ಎಂದು ಟೀಕಿಸಿದರು.

ಈ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರ ಮೌನವನ್ನೂ ಅವರು ಕಟುವಾಗಿ ಪ್ರಶ್ನಿಸಿದರು. ಸಣ್ಣಪುಟ್ಟ ವಿಷಯಗಳಿಗೂ ರಾಷ್ಟ್ರೀಯ ಹಿತಾಸಕ್ತಿಯ ಹೆಸರಿನಲ್ಲಿ ಮಾತನಾಡುವ ಬಿಜೆಪಿ ನಾಯಕರು, ಕೇಂದ್ರದ ಈ ದೊಡ್ಡ ವೈಫಲ್ಯದ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳು ಪದೇ ಪದೇ ನಡೆಯುತ್ತಿದ್ದರೂ ಕೇಂದ್ರದ ಮೇಲೆ ಒತ್ತಡ ತರಲು ಸ್ಥಳೀಯ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಇದು ಕೇವಲ ಪರೀಕ್ಷೆಯ ವಿಚಾರವಲ್ಲ, ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಹೇಳಿದರು.

ಕೇವಲ ಸಿಬಿಐ ತನಿಖೆಗೆ ಆದೇಶಿಸಿ ಕೇಂದ್ರ ಸರ್ಕಾರ ಕೈತೊಳೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕ ಹಾಗೂ ಭದ್ರ ಪರೀಕ್ಷಾ ವ್ಯವಸ್ಥೆ ರೂಪಿಸಬೇಕು. ಇಲ್ಲವಾದರೆ ಪರೀಕ್ಷಾ ಪದ್ಧತಿಯ ಮೇಲಿನ ಜನರ ನಂಬಿಕೆ ಸಂಪೂರ್ಣ ಕುಸಿಯಲಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ