LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ 

ದಾವಣಗೆರೆ: ರಾಜ್ಯದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ ಎಂದು  ನಮಗೆ ಸಂಪೂರ್ಣ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.



ದಾವಣಗೆರೆ ನಗರದಲ್ಲಿ ಮಹಾರಾಷ್ಟ್ರ ಗಡಿ ಕ್ಯಾತೆ ಕುರಿತು ಪ್ರತಿಕ್ರಿಯಿಸಿದ ಅವರು, ಸ್ಟೇಟ್ ರಿ-ಆರ್ಗನೈಸೇಷನ್ ವಿಚಾರದಲ್ಲಿ ಆರ್ಟಿಕಲ್ಸ್ 3 ಅಡಿಯಲ್ಲಿ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ದಾವೆ ಹೂಡಿದೆ ಎಂದರು.



ಅವರು ಹೂಡಿರುವ ದಾವೆ ನ್ಯಾಯ ಸಮ್ಮತವಲ್ಲ, ಅನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ, ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗೊಲ್ಲ. ಕರ್ನಾಟಕದ ಯಾವುದೇ ಪ್ರದೇಶ ಬದಲಾಗೊಲ್ಲ. ಅವರದ್ದು ಬೇರೆ ಬೇರೆ ಡಿಮ್ಯಾಂಡ್ ಇದೆ. ಮುಂದಿ‌ನ ವಾರ ಸರ್ವ ಪಕ್ಷಗಳ ಹಾಗೂ ಕಾನೂನು ತಜ್ಞರ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದರು.



ಇನ್ನು ಎನ್​ಸಿಪಿ ಮುಖ್ಯಸ್ಥ ಶರದ ಪವಾರ ಮೇಲೆ ನಮಗೆ ಅಪಾರವಾದ ಗೌರವ ಇದೆ. ಅವರು ಹಿರಿಯರು, ಶರದ ಪವಾರ ಬಹಳ ವರ್ಷಗಳಿಂದ ಕರ್ನಾಟಕ ಮಹರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಕನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಿಸುವ ಕನಸು ನನಸಾಗುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ