LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯುತ್ ನಿಗಮಗಳ ಖಾಸಗೀಕರಣದ ಪ್ರಶ್ನೆಯೇ ಇಲ್ಲ: ಕೆ.ಜೆ.ಜಾರ್ಜ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ನಿಗಮಗಳ ಖಾಸಗೀಕರಣಕ್ಕೆ ಯಾವುದೇ ಅವಕಾಶ ಇಲ್ಲ. ಜನರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಸಂಪೂರ್ಣ ಸಾಮರ್ಥ್ಯ ಹೊಂದಿದ್ದು, ಸರ್ಕಾರ ನೌಕರರ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದರು.

ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ವಿವಿಧ ಸಂಘಗಳ ಒಕ್ಕೂಟ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಟಾಟಾ ಪವರ್ ಕಂಪನಿ ಕರ್ನಾಟಕದಲ್ಲಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದರು.

ಖಾಸಗೀಕರಣದ ಬಗ್ಗೆ ಆತಂಕ ಬೇಡ. ಸರ್ಕಾರ ಈಗಾಗಲೇ ಸೂಕ್ತ ನಿರ್ದೇಶನ ನೀಡಿದ್ದು, ಅದರಂತೆ ಎಲ್ಲ ಎಸ್ಕಾಂಗಳು ನಿಯಂತ್ರಣ ಆಯೋಗದ ಮುಂದೆ ತಮ್ಮ ಆಕ್ಷೇಪಣೆ ಸಲ್ಲಿಸಿವೆ. ಖಾಸಗಿ ಕಂಪನಿಗಳಿಗಿಂತ ನಮ್ಮ ಇಂಧನ ಇಲಾಖೆ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ. ನೌಕರರ ಹಾಗೂ ಅಧಿಕಾರಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಅವರು ಹೇಳಿದರು.

ಖಾಸಗೀಕರಣದ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು. ಜನಸೇವೆಯೇ ಸರ್ಕಾರದ ಉದ್ದೇಶವಾಗಿದ್ದು, ರಾಜ್ಯದಲ್ಲಿ ವಿದ್ಯುತ್ ನಿಗಮಗಳನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ಮುಂದಿನ ಇಪ್ಪತ್ತೈದು ವರ್ಷಗಳ ವಿದ್ಯುತ್ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ದೂರದೃಷ್ಟಿಯ ಯೋಜನೆಗಳನ್ನು ರೂಪಿಸಲಾಗಿದೆ. ರೈತರ ಸಹಭಾಗಿತ್ವದಲ್ಲಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಸೌರ ಉದ್ಯಾನ ಅಭಿವೃದ್ಧಿಪಡಿಸಲಾಗಿದ್ದು, ಇನ್ನಷ್ಟು ಭೂಮಿ ನೀಡಲು ರೈತರು ಮುಂದೆ ಬಂದಿದ್ದಾರೆ. ವಿದ್ಯುತ್ ಉತ್ಪಾದನೆ ಹೆಚ್ಚಿದ್ದು, ದೀರ್ಘಾವಧಿ ಒಪ್ಪಂದಗಳು ಹಾಗೂ ವಿದ್ಯುತ್ ವಿನಿಮಯ ವ್ಯವಸ್ಥೆ ಮೂಲಕ ಇಂಧನ ಭದ್ರತೆ ಬಲಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ ಒಂದು ಕೋಟಿ ಅರವತ್ತೇಳು ಲಕ್ಷ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಸಲು ಇಪ್ಪತ್ತೊಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಇಂಧನ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡುತ್ತಿರುವುದರಿಂದ ಸಮಸ್ಯೆಗಳಿಗೆ ತ್ವರಿತ ಪರಿಹಾರ ಸಿಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಮೂಲಸೌಕರ್ಯ ವಿಸ್ತರಣೆಗೆ ಈಗಾಗಲೇ ನೂರ ಇಪ್ಪತ್ತು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತಂದು ವಿದ್ಯುತ್ ಪೂರೈಕೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮ ಮಂದಿರ ದೇಣಿಗೆ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಮ ಕೋರ್ಟ ನಿರಾಕರಣೆರಕ್ತದಾನಿಗಳಿಗೆ ₹1 ಲಕ್ಷವರೆಗೆ ಉಚಿತ ಅಪಘಾತ ವಿಮೆಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ; ಸಾರ್ವಜನಿಕರ ಸಹಕಾರಕ್ಕೆ ಆಯುಕ್ತ ಕಾರ್ತಿಕ ಮನವಿಚಾಲನೆಯಲ್ಲೇ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರುವೈರಲ್ ಆಡಿಯೋದಿಂದ ಬಿಜೆಪಿಯಲ್ಲಿ ಮತ್ತೆ ಸಂಚಲನರಾಮ ಮಂದಿರ ದೇಣಿಗೆ ಹಗರಣ: ಆರೋಪಿಗಳ ಪರ ವಕಾಲತ್ತು ವಹಿಸದಿರಲು ಅಯೋಧ್ಯೆ ವಕೀಲರ ಸಂಘದ ನಿರ್ಧಾರವಿದ್ಯುತ್ ನಿಗಮಗಳ ಖಾಸಗೀಕರಣದ ಪ್ರಶ್ನೆಯೇ ಇಲ್ಲ: ಕೆ.ಜೆ.ಜಾರ್ಜವಿದ್ಯುತ್ ಖಾಸಗೀಕರಣದ ಬಗ್ಗೆ ಸಚಿವ ಸಂಪುಟದಲ್ಲೇ ಅಂತಿಮ ನಿರ್ಧಾರ: ಡಿ.ಕೆ.ಶಿವಕುಮಾರಮನುಷ್ಯರನ್ನು ಕೊಂದವರು ಪ್ರಧಾನಿ, ಮುಖ್ಯಮಂತ್ರಿಗಳಾಗುತ್ತಾರೆ; ಹರಿಪ್ರಸಾದ ವಿವಾದಿತ ಹೇಳಿಕೆಸ್ಪೆಲ್ಲಿಂಗ್ ತಪ್ಪಾದ ಮಾತ್ರಕ್ಕೆ ಜನರ ಹಕ್ಕು ಕಿತ್ತುಕೊಳ್ಳುವುದು ತಪ್ಪು