LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಖ್ಯಾತ ನಿರ್ದೇಶಕ ಎಸ್.ಕೆ.ಭಗವಾನ್ ನಿಧನ

ಬೆಂಗಳೂರು: ಡಾ. ರಾಜಕುಮಾರ ಅವರ ಹಲವಾರು ಸುಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶಿಸಿದ್ದ ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.



ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.



ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು 'ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ' ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.



ಎಸ್.ಕೆ. ಭಗವಾನ್ ಅವರು 1933 ಜುಲೈ 3ರಂದು ತಮಿಳು ಬ್ರಾಹ್ಮಣ ಅಯ್ಯರ್ ಕುಟುಂಬದಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಯುವಕರಾಗಿದ್ದಾಗ 'ಹಿರಣ್ಣಯ್ಯ ಮಿತ್ರ ಮಂಡಳಿ'ಯಲ್ಲಿ ನಾಟಕಗಳನ್ನು ಮಾಡುತ್ತಿದ್ದರು. 1956ರಲ್ಲಿ ಕಣಗಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕರಾಗಿ ಸಿನೆಮಾ ಜೀವನ ಆರಂಭಿಸಿದರು.



ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಅನನ್ಯ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು 'ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ' ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.



1966ಲ್ಲಿ ಎಂ.ಸಿ. ನರಸಿಂಹಮೂರ್ತಿ ಅವರೊಂದಿಗೂ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ ನಾಯಕ ನಟನಾಗಿರುವ 'ಜೇಡರ ಬಲೆ' ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು.



ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕರಿಬ್ಬರು ಜೋಡಿಯಾಗೇ ನಿರ್ದೇಶಿಸಿದರು. 'ಕಸ್ತೂರಿ ನಿವಾಸ', 'ಎರಡು ಕನಸು', 'ಬಯಲು ದಾರಿ', 'ಗಿರಿ ಕನ್ಯೆ', 'ಚಂದನದ ಗೊಂಬೆ', 'ವಸಂತ ಗೀತ', 'ಆಪರೇಷನ್ ಡೈಮಂಡ್ ರಾಕೆಟ್', 'ಹೊಸಬೆಳಕು', 'ಯಾರಿವನು' ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ ೩೦ ಚಿತ್ರಗಳಲ್ಲಿ ಡಾ.ರಾಜಕುಮಾರ ಅವರು ನಾಯಕ ನಟರಾಗಿ ಅಭಿನಯಿಸಿದ್ದಾರೆ.



ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದರು. ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಹೊಂದಿದರು. 1992 'ಮಾಂಗಲ್ಯ ಬಂಧನ' ದೊರೈ-ಭಗವಾನ್ ಜೋಡಿ ನಿರ್ದೇಶನದ ಕೊನೆಯ ಚಿತ್ರವಾಗಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ