LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ತಿರಂಗಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ಅಭಿಜೀತ ದೀಪ್ಕೆಗೆ ನೋಟಿಸ್

ಹೊಸದಿಲ್ಲಿ, ಅ. 16: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಶುಕ್ರವಾರ ದಿಲ್ಲಿಯಲ್ಲಿ ಆಯೋಜಿಸಿದ್ದ ‘ತಿರಂಗಾ ಯಾತ್ರೆ’ಗೆ ಕೆಲವೇ ಗಂಟೆಗಳ ಮೊದಲು ಸಂಘಟನೆಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಂಗಿದ್ದ ನಿವಾಸಕ್ಕೆ 20ಕ್ಕೂ ಹೆಚ್ಚು ಪೊಲೀಸರು ತೆರಳಿ, ಪ್ರತಿಭಟನೆಯಲ್ಲಿ ಭಾಗವಹಿಸದಂತೆ ನೋಟಿಸ್ ಜಾರಿ ಮಾಡಿದ್ದಾರೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣ) ವಕ್ತಾರ ಅನೀಶ್ ಗವಾಂಡೆ ಅವರ ನಿವಾಸದಲ್ಲಿ ದೀಪ್ಕೆ ತಂಗಿದ್ದರು. ಕನ್ನಾಟ್ ಪ್ಲೇಸ್‌ನಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ದಿಲ್ಲಿ ಪೊಲೀಸರು ಅವರಿಗೆ ಸೂಚಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮೆರವಣಿಗೆಗೆ ನವದೆಹಲಿ ಪುರಸಭೆ ಮಂಡಳಿ (ಎನ್‌ಡಿಎಂಸಿ) ಅನುಮತಿ ನೀಡಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ನಿರ್ಬಂಧ ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ಪ್ರತಿಕ್ರಿಯಿಸಿದ ಅನೀಶ್ ಗವಾಂಡೆ, ತಾವು ಊಟಕ್ಕೆ ಹೊರಗೆ ತೆರಳಿದ್ದಾಗ ಪೊಲೀಸರು ನಿವಾಸಕ್ಕೆ ಆಗಮಿಸಿದ್ದರು. ಅಭಿಜೀತ್ ದೀಪ್ಕೆ ತಮ್ಮ ಅತಿಥಿಯಾಗಿದ್ದು, ನೋಟಿಸ್ ಪರಿಶೀಲಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ತಿರಂಗಾ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ ಅವರು, ಪೊಲೀಸರು ತಡೆದರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

‘ಹರ್ ಘರ್ ತಿರಂಗಾ ಎಂದು ಹೇಳುವವರು ತ್ರಿವರ್ಣ ಧ್ವಜಕ್ಕೆ ಹೆದರಬಾರದು. ಶಾಂತಿಯುತ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಿದರೆ ಅದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ’ ಎಂದು ಗವಾಂಡೆ ಟೀಕಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಿಜೆಪಿ ತಿರಂಗಾ ಯಾತ್ರೆಗೆ ಕರೆ ನೀಡಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST