LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್ ಹೆಸರಲ್ಲಿ ₹ 1.30 ಕೋಟಿ ವಂಚನೆ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ

ಬೆಳಗಾವಿ :  ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿ ಮಾಡಿ, 1 ಕೋಟಿ 30 ಲಕ್ಷ  ರೂಪಾಯಿ ಎಗರಿಸಿ ಪರಾರಿಯಾಗಿದ್ದ ಅಂತರ್ರಾಜ್ಯ ಕದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.‌



ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಆತ ಮೋಸ ಮಾಡಿದ್ದಾನೆ. ಅವರಿಂದ ಸುಮಾರು 1,30,41,884 ರೂಪಾಯಿ ಎಗರಿಸಿ ಪರಾರಿಯಾಗಿದ್ದನು. ಇದರ ಜಾಡು ಹೀಡಿದ ಪೊಲೀಸರ ತಂಡ ಆರೋಪಿಯನ್ನು ಮಹಾರಾಷ್ಟ್ರದ  ಮುಂಬೈನಲ್ಲಿ ಪತ್ತೆ ಹಚ್ಚಿ ಚಾಲಾಕಿ ವಂಚಕನನ್ನು ಬಂಧಿಸಿದ್ದಾರೆ.



ತೆಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್ ಅರುಣಕುಮಾರ (43) ಎಂಬವನನ್ನು ಬಂಧಿಸಿರುವ ಪೊಲೀಸರು ಅವನಿಂದ 12 ಲಕ್ಷ 66 ಸಾವಿರ ರೂಪಾಯಿ ಹಣ ಹಾಗೂ ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಕಂಪ್ಯೂಟರ್ ಗಳು ಸೇರಿದಂತೆ 12,66,900 ಬೆಲೆಯ ವಸ್ತುಗಳನ್ನು ಜಫ್ತು ಮಾಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ