ಬೆಂಗಳೂರು, ನ. 23: ‘ಈ ಸರ್ಕಾರಕ್ಕಿಂತ ನನ್ನ ಕ್ಷೇತ್ರದ ಜನರೇ ಮುಖ್ಯ’ ಎಂದು ಘೋಷಿಸಿರುವ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಸೋಮವಾರ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಹಿಂದೆ ಘೋಷಿಸಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಯನಾ ಮೋಟಮ್ಮ ಅವರು ಸೋಮವಾರ ವಿಧಾನಸೌಧದ ವಿಧಾನಸಭಾಧ್ಯಕ್ಷರ ಕಚೇರಿಗೆ ತೆರಳಿದ್ದರು. ಆದರೆ, ವಿಧಾನಸಭಾಧ್ಯಕ್ಷರು ಕಚೇರಿಯಲ್ಲಿ ಇಲ್ಲದ ಕಾರಣ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ವಿಧಾನಸಭಾಧ್ಯಕ್ಷರನ್ನು ಭೇಟಿಯಾಗಲು ಮಂಗಳವಾರ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಅಂದೇ ಅವರನ್ನು ಖುದ್ದಾಗಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.
ಆದರೆ, ವಿಧಾನಸಭಾಧ್ಯಕ್ಷರು ರಾಜೀನಾಮೆಯನ್ನು ಅಂಗೀಕರಿಸುವವರೆಗೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಅಧಿಕೃತವಾಗಿ ಜಾರಿಯಾಗುವುದಿಲ್ಲ.