LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ; ಲಾಕ್ ಡೌನ್ ವಿರೋಧಿಸಿ ಬೀದಿಗಿಳಿದ ಜನ

ಬೀಜಿಂಗ, ೨೮- ಇಡೀ ವಿಶ್ವಕ್ಕೆ ಕೊರೊನಾ ಸೋಂಕನ್ನು ಹರಡಿದ ಚೀನಾದಲ್ಲಿ ಈಗ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಅಲ್ಲದೆ ಕಡ್ಡಾಯ ಪಿಸಿಆರ್ ಪರೀಕ್ಷೆ ಮಾಡಲಾಗುತ್ತಿದ್ದು, ಇದೆಲ್ಲದರ ವಿರುದ್ಧ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.



ಭಾನುವಾರ ಒಂದೇ ದಿನ 40,000ಕ್ಕೂ ಅಧಿಕ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ಸೋಂಕು ವ್ಯಾಪಕವಾಗಿರುವ ಪ್ರದೇಶಗಳಲ್ಲಿ ಜನ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ.



ಹೀಗಾಗಿ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದು, ಇದರಿಂದಾಗಿ ಸೋಂಕು ಮತ್ತಷ್ಟು ಹೆಚ್ಚಳವಾಗುವ ಆತಂಕ ಎದುರಾಗಿದೆ. ಕೆಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚೀನಾದಲ್ಲಿ ಈಗ ಕಾಣಿಸಿಕೊಂಡಿರುವ ಸೋಂಕು ಲಕ್ಷಣರಹಿತ ಪ್ರಕರಣಗಳಾಗಿದ್ದು, ಒಂದೊಮ್ಮೆ ಕೊರೊನಾದ ಹೊಸ ರೂಪಾಂತರ ವರದಿಯಾದಲ್ಲಿ ಚೀನಾದಿಂದ ಜಗತ್ತಿಗೆ ಮತ್ತೊಮ್ಮೆ ಕಂಟಕ ಬರುವ ಸಾಧ್ಯತೆ ಇದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ